HomeKarnatakaರಾಜ್ಯದಲ್ಲಿ 7 ದಿನ ಉತ್ತಮ ಮಳೆ: 6 ಜಿಲ್ಲೆಗಳಲ್ಲಿ ಭಾರಿ ಮಳೆ ಕಾರಣ ಯೆಲ್ಲೋ ಅಲರ್ಟ್

ರಾಜ್ಯದಲ್ಲಿ 7 ದಿನ ಉತ್ತಮ ಮಳೆ: 6 ಜಿಲ್ಲೆಗಳಲ್ಲಿ ಭಾರಿ ಮಳೆ ಕಾರಣ ಯೆಲ್ಲೋ ಅಲರ್ಟ್

ಬೆಂಗಳೂರು: ರಾಜ್ಯದಲ್ಲಿ ಮುಂದಿನ 24 ಗಂಟೆ ಅವಧಿಯಲ್ಲಿ 6 ಜಿಲ್ಲೆಗಳಲ್ಲಿ ಭಾರಿ ಮಳೆ ಆಗುವ ಸಂಭವ ಇರುವುದರಿಂದ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ನೀಡಿದೆ.

ಉತ್ತರ ಒಳನಾಡಿನ ಕಲಬುರಗಿ, ಬೀದರ್, ಯಾದಗಿರಿ, ಕರಾವಳಿಯ ದಕ್ಷಿಣ ಕನ್ನಡ ಮತ್ತು ದಕ್ಷಿಣ ಒಳನಾಡಿನ ರಾಮನಗರ, ತುಮಕೂರು ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುವ ಸಂಭವ ಇದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸೆಪ್ಟೆಂಬರ್ 26ರಂದು ವಿಜಯನಗರ, ಸೆಪ್ಟಂಬರ್ 28ರಂದು ವಿಜಯನಗರ, ಕೊಪ್ಪಳ, ರಾಯಚೂರು, ಸೆಪ್ಟೆಂಬರ್ 29ರಂದು ದಕ್ಷಿಣ ಕನ್ನಡ, ಧಾರವಾಡ, ಬೆಳಗಾವಿ, ರಾಯಚೂರು, ಕಲಬುರಗಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ರಾಜ್ಯದ ಎಲ್ಲಾ ಭಾಗದಲ್ಲಿ ಮುಂದಿನ 7 ದಿನ ಉತ್ತಮ ಮಳೆ ಆಗುವ ಸಂಭವ ಇದೆ ಎಂದು ಹವಾಮಾನ ಇಲಾಖೆ ಮನ್ಸೂಚನೆ ನೀಡಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular