ಜೂನ್ ಮೊದಲ ವಾರದಿಂದ ಕಡಿಮೆಯಾಗಲಿದೆ ಮಳೆ ಪ್ರಮಾಣ

ಬೆಂಗಳೂರು: ರಾಜ್ಯದ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಕೆಲವು ಪ್ರದೇಶಗಳಲ್ಲಿ ಶುಕ್ರವಾರ ಭಾರಿ ಮಳೆಯಾಗಿದ್ದು, ಜೂನ್ ಮೊದಲ ವಾರದಿಂದ ಮಳೆಯ ಪ್ರಮಾಣ ಸಾಕಷ್ಟು ತಗ್ಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಮೇ 31 ರಂದು ಹೆಚ್ಚಿನ ಮಳೆಯಾಗುವ ಸಂಭವ ಇರುವುದರಿಂದ ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ. ಕೊಡಗು, ಉತ್ತರ ಕನ್ನಡ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಸಾಧಾರಣ ಮಳೆ ಆಗಲಿದ್ದು, ಮೊದಲ ಮೂರು ದಿನ ಕರಾವಳಿ ಭಾಗದಲ್ಲಿ ಮಳೆ ಪ್ರಮಾಣ ತುಸು ಹೆಚ್ಚಾಗಿರುತ್ತದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read