ಬೆಂಗಳೂರು : ಇಂದಿನಿಂದ ರಾಜ್ಯಾದ್ಯಂತ ಮತ್ತೆ ಮಳೆ ಆರ್ಭಟ ಶುರುವಾಗಲಿದ್ದು, 18 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ಇಂದು 18 ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಎಲ್ಲೆಲ್ಲಿ ಮಳೆ
ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಬೆಂಗಳೂರು ನಗರ ಹಾಗೂ ಗ್ರಾಮಾಂತರ, ಚಿಕ್ಕಬಳ್ಳಾಪುರ, ಹಾಸನ, ಚಾಮರಾಜನಗರ, ಮಂಡ್ಯ, ಮೈಸೂರು. ಕೊಡಗು, ತುಮಕೂರು, ಕೋಲಾರ ಜಿಲ್ಲೆಗಳಲ್ಲಿ ಗಾಳಿ –ಗುಡುಗು ಸಹಿತ ಮಳೆಯಾಗಲಿದೆ.ಬೆಳಗಾವಿ, ಧಾರವಾಡ, ರಾಯಚೂರು, ಯಾದಗಿರಿ ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಮಳೆಯಾಗುವ ಸಾಧ್ಯತೆಯಿದೆ.

