HomeKarnatakaಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಆಹಾರ ಭದ್ರತಾ ಕಾಯ್ದೆಯಡಿ ಉಚಿತ ರೇಷನ್

ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಆಹಾರ ಭದ್ರತಾ ಕಾಯ್ದೆಯಡಿ ಉಚಿತ ರೇಷನ್

ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆ ಮತ್ತು ಓಎಂಎಸ್‌ಎಸ್(ಡಿ) ಯೋಜನೆಯಡಿ ನ್ಯಾಯಬೆಲೆ ಅಂಗಡಿಗಳಲ್ಲಿ ಪಡಿತರ ಚೀಟಿದಾರರಿಗೆ ಮಾರ್ಚ್-2025 ಮಾಹೆಗೆ ಪಡಿತರ ವಿತರಣೆ ಮಾಡಲಾಗುತ್ತಿದೆ.

ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿ ಅಂತ್ಯೋದಯ ಪಡಿತರ ಚೀಟಿಗಳಿಗೆ ಫೆಬ್ರವರಿ ಮತ್ತು ಮಾರ್ಚ್-2025 ರ ಮಾಹೆ ಸೇರಿ 1 ರಿಂದ 3 ಸದಸ್ಯರಿರುವ ಕುಟುಂಬಕ್ಕೆ 35 ಕೆಜಿ ಅಕ್ಕಿ, 4 ಸದಸ್ಯರಿರುವ ಕುಟುಂಬಕ್ಕೆ 45 ಕೆಜಿ, 5 ಸದಸ್ಯರಿರುವ ಕುಟುಂಬಕ್ಕೆ 55 ಕೆಜಿ, 6 ಸದಸ್ಯರಿರುವ ಕುಟುಂಬಕ್ಕೆ 65 ಕೆಜಿ, 7 ಸದಸ್ಯರಿರುವ ಕುಟುಂಬಕ್ಕೆ 75 ಕೆಜಿ ಅಕ್ಕಿಯನ್ನು ಉಚಿತವಾಗಿ ವಿತರಿಸಲಾಗುತ್ತದೆ.

ಬಿಪಿಎಲ್ ಪಡಿತರ ಚೀಟಿಗಳಿಗೆ ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆ ಮತ್ತು ಓಎಂಎಸ್‌ಎಸ್(ಡಿ) ಯೋಜನೆಯಡಿ ಫೆಬ್ರವರಿ ಮತ್ತು ಮಾರ್ಚ್-2025 ರ ಮಾಹೆ ಸೇರಿ ಪ್ರತಿ ಸದಸ್ಯರಿಗೆ 15 ಕೆಜಿ ಅಕ್ಕಿಯನ್ನು ಉಚಿತವಾಗಿ ವಿತರಿಸಲಾಗುತ್ತದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಅಂತರರಾಜ್ಯ/ಅಂತರ್ ಜಿಲ್ಲೆ ಪೋರ್ಟಬಿಲಿಟಿ ಜಾರಿಯಲ್ಲಿರುವುದರಿಂದ ಯಾವುದೇ ಪಡಿತರ ವರ್ಗದ ಪಡಿತರ ಚೀಟಿಗಳಿಗೆ ಯಾವುದೇ ನ್ಯಾಯಬೆಲೆ ಅಂಗಡಿಗಳಲ್ಲಿ ಪಡಿತರ ಪಡೆಯಲು ಅವಕಾಶ ಕಲ್ಪಿಸಲಾಗಿದೆ.

ಒಂದು ವೇಳೆ ನ್ಯಾಯಬೆಲೆ ಅಂಗಡಿಯವರು ಕಡಿಮೆ ಪ್ರಮಾಣ ವಿತರಿಸಿದಲ್ಲಿ ಉಚಿತ ದೂರವಾಣಿ ಸಂಖ್ಯೆ: 1967 ಅಥವಾ ತಹಶೀಲ್ದಾರ್ ಕಚೇರಿ ಮತ್ತು ಉಪನಿರ್ದೇಶಕರ ಕಚೇರಿ ಆಹಾರ ಇಲಾಖೆ ಇವರಿಗೆ ದೂರು ಸಲ್ಲಿಸಬಹುದು ಎಂದು ಬಳ್ಳಾರಿ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಉಪನಿರ್ದೇಶಕರಾದ ಸಕೀನಾ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular