HomeKarnatakaರೈತರ ಪ್ರತಿಭಟನೆ: ಅಕ್ಟೋಬರ್ 23ರಂದು ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇ ಬಂದ್

ರೈತರ ಪ್ರತಿಭಟನೆ: ಅಕ್ಟೋಬರ್ 23ರಂದು ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇ ಬಂದ್

ಮಂಡ್ಯ: ಕಬ್ಬು ಬೆಳೆಗೆ ಸೂಕ್ತ ಬೆಲೆ ನಿಗದಿಗೆ ಆಗ್ರಹಿಸಿ ಹಾಗೂ ರೈತರ ಸಾಲ ಮನ್ನಾ ಮಾಡಬೇಕೆಂದು ಒತ್ತಯೈಸಿ ಕರ್ನಾಟಕ ರೈತಸಂಘದ ನೇತೃತ್ವದಲ್ಲಿ ರೈತರು ಪ್ರತಿಭಟನೆಗೆ ಕರೆ ನೀಡಿದ್ದು, ಬೆಂಗಳುರು-ಮೈಸೂರು ಎಕ್ಸ್ ಪ್ರೆಸ್ ವೇ ಸಂಪೂರ್ಣ ಬಂದ್ ಮಾಡಿ ಹೋರಾಟ ನಡೆಸಲಿದ್ದಾರೆ.

ಅಕ್ಟೋಬರ್ 23ರಂದು ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಬಂದ್‌ ಆಗಲಿದೆ. ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಗಣಂಗೂರು ಸಮೀಪದ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಟೋಲ್‌ ಬಳಿ ಪ್ರತಿಭಟನೆ ನಡೆಯಲಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ರೈತಸಂಘದ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ ನೇತೃತ್ವದಲ್ಲಿ 5,000ಕ್ಕೂ ಹೆಚ್ಚು ರೈತರು ಪ್ರತಿಭಟನೆಯಲ್ಲಿ ಭಾಗವಹಿಸುವ ನಿರೀಕ್ಷೆಯಿದೆ. ಈ ವೇಳೆ ಹೆದ್ದಾರಿ ತಡೆ ನಡೆಸಿ ಸರ್ಕಾರದ ಗಮನ ಸೆಳೆಯಲು ರೈತರು ಮುಂದಾಗಿದ್ದಾರೆ.

ಪ್ರತಿ ಟನ್ ಕಬ್ಬಿಗೆ 5,500 ರೂ. ಬೆಲೆ ನಿಗದಿಪಡಿಸಬೇಕು ಎಂಬುದು ರೈತರ ಪ್ರಮುಖ ಬೇಡಿಕೆಯಾಗಿದೆ. ಕಬ್ಬಿನ ಬೆಲೆ ನಿಗದಿ ವಿಚಾರದಲ್ಲಿ ಕೇಂದ್ರ ಸರ್ಕಾರದ ಪಾತ್ರ ಹೆಚ್ಚಾಗಿದ್ದು, ಸಕ್ಕರೆ ಕಾರ್ಖಾನೆಗಳ ಮೇಲೆ ಸರ್ಕಾರದ ಹಿಡಿತ ಕಡಿಮೆಯಾಗಿದೆ ಎಂದು ರೈತಸಂಘ ಆರೋಪಿಸಿದೆ. ಸರ್ಕಾರ ಮತ್ತೆ ಕಾರ್ಖಾನೆಗಳ ಮೇಲೆ ಹಿಡಿತ ಸಾಧಿಸಬೇಕು ಎಂದು ಒತ್ತಾಯಿಸಿದೆ.

ಕರ್ನಾಟಕ ಸರ್ಕಾರವು ರೈತರಿಗೆ ಕಬ್ಬಿನ ಬಾಕಿ ಹಣವನ್ನು ಇನ್ನೂ ಪಾವತಿಸಿಲ್ಲ ಎಂದು ರೈತಸಂಘ ದೂರಿದೆ. ಬಾಕಿ ಹಣವನ್ನು ಕೂಡಲೇ ರೈತರ ಖಾತೆಗೆ ಜಮೆ ಮಾಡಬೇಕು ಎಂದು ಆಗ್ರಹಿಸಿದೆ. ಬರಗಾಲದಿಂದ ಸಂಕಷ್ಟಕ್ಕೆ ಸಿಲುಕಿರುವ ರೈತರ ಸಂಪೂರ್ಣ ಸಾಲ ಮನ್ನಾ ಮಾಡಬೇಕು ಎಂದು ಒತ್ತಾಯಿಸಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ರೈತರ ಬೇಡಿಕೆಗಳಿಗೆ ತಕ್ಷಣ ಸ್ಪಂದಿಸಬೇಕು ಎಂದು ಆಗ್ರಹಿಸಲಾಗಿದೆ.

ರೈತರ ಬೇಡಿಕೆಗಳನ್ನು ಸರ್ಕಾರಗಳು ನಿರ್ಲಕ್ಷಿಸಿದರೆ ಮುಂದಿನ ದಿನಗಳಲ್ಲಿ ಇನ್ನಷ್ಟು ಉಗ್ರ ಹೋರಾಟ ನಡೆಸಲಾಗುವುದು ಎಂದು ರೈತಸಂಘ ಎಚ್ಚರಿಕೆ ನೀಡಿದೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular