HomeKarnatakaBIG NEWS: ರಾಜಭವನದಿಂದ ಮಾಹಿತಿ ಸೋರಿಕೆ: ತನಿಖೆ ನಡೆಸಲು ಅನುಮತಿ ಕೋರಿ ಡಿಜಿ-ಐಜಿಪಿಗೆ ಲೋಕಾಯುಕ್ತ ಪತ್ರ

BIG NEWS: ರಾಜಭವನದಿಂದ ಮಾಹಿತಿ ಸೋರಿಕೆ: ತನಿಖೆ ನಡೆಸಲು ಅನುಮತಿ ಕೋರಿ ಡಿಜಿ-ಐಜಿಪಿಗೆ ಲೋಕಾಯುಕ್ತ ಪತ್ರ

ಬೆಂಗಳೂರು: ರಾಜ್ಯ ಸರ್ಕಾರ ಹಾಗೂ ರಾಜಭವನದ ನಡುವಿನ ಸಂಘರ್ಷ ಮುಂದುವರೆದಿದೆ. ರಾಜಭವನದಿಂದಲೇ ಮಾಹಿತಿ ಸೋರಿಕೆಯಾಗಿದೆ ಎಂಬ ಆರೋಪ ಕೇಳಿಬರುತ್ತಿದೆ. ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿರುದ್ಧ ಲೋಕಾಯುಕ್ತರು ಕಾನೂನು ಕ್ರಮ ಮತ್ತು ತನಿಖೆಗೆ ಅನುಮತಿ ನೀಡುವಂತೆ ಕೋರಿ ರಾಜ್ಯಪಾಲರಿಗೆ ಬರೆದಿದ್ದ ಪತ್ರ ಸೋರಿಕೆಯಾಗಿದ್ದು, ಚರ್ಚೆಗೆ ಕಾರಣವಾಗಿತ್ತು. ಇದೀಗ ಇದೇ ವಿಚಾರವಾಗಿ ರಾಜಭವನದ ಅಧಿಕಾರಿಗಳ ವಿರುದ್ಧ ತನಿಖೆ ನಡೆಸಲು ಲೋಕಾಯುಕ್ತ ಮುಂದಾಗಿದೆ.

ರಾಜಭವನದ ಅಧಿಕಾರಿಗಳ ವಿರುದ್ಧ ತನಿಖೆ ನಡೆಸಲು ಅನುಮತಿ ಕೊರಿ ಡಿಜಿ-ಐಜಿಪಿ ಹಾಗೂ ಎಡಿಜಿಪಿಗೆ ಲೋಕಾಯುಕ್ತ ಎಸ್ ಐಟಿ ಐಜಿಪಿ ಚಂದ್ರಶೇಖರ್ ಪತ್ರ ಬರೆದಿದ್ದಾರೆ.

ಹೆಚ್.ಡಿ.ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಣಿ ನಿಯಮ ಉಲ್ಲಂಘನೆ ಆರೋಪದ ತನಿಖೆಗೆ ಅಥವಾ ಕಾನೂನು ಕ್ರಮ ತೆಗೆದುಕೊಳ್ಳಲು ಅನುಮತಿ ಕೋರಿ ಲೋಕಾಯುಕ್ತ 2023 ಸೆ.24ರಂದು ರಾಜ್ಯಪಾಲರಿಗೆ ಪ್ರಸ್ತಾವ ಸಲ್ಲಿಸಿತ್ತು. ನಿಯಮಗಳ ಪ್ರಕಾರ ನಾಲ್ಕು ತಿಂಗಳ ಒಳಗೆ ಕಡತ ವಿಲೇವಾರಿ ಮಾಡಬೇಕು. ಆದರೆ 8 ತಿಂಗಳಾದರೂ ರಾಜ್ಯಪಾಲರ ಸಚಿವಾಲಯದಲ್ಲೇ ಬಾಕಿ ಉಳಿದಿದೆ. ಇದು ಬ್ರಷ್ಟಾಚಾರ ನಿಯಂತ್ರಣ ಕಾಯ್ದೆಯ ಸೆಕ್ಷನ್ 19ರ ಪ್ರಕಾರ ಸ್ಪಷ್ಟ ಉಲ್ಲಂಘನೆಯಾಗಿದೆ. ಕುಮಾರಸ್ವಾಮಿ ವಿರುದ್ಧ ತನಿಖೆಗೆ ಅನುಮತಿ ಕೋರಿ ಲೋಕಾಯುಕ್ತ ರಾಜ್ಯಪಾಲರಿಗೆ ಬರೆದಿದ್ದ ಪತ್ರ ವಿಚರ ಆ.27ರಂದು ಬಹಿರಂಗವಾಗಿತ್ತು. ಈ ಹಿನ್ನೆಲೆಯಲ್ಲಿ ರಾಜಭವನದಿಂದಲೇ ಮಾಹಿತಿ ಸೋರಿಕೆಯಾಗುತ್ತಿದೆ ಎಂದು ಆಡಳಿತ ಪಕ್ಷ ಕಾಂಗ್ರೆಸ್ ಆರೋಪಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular