BIG NEWS: ಭಾರತೀಯ ಸೇನೆ ಸಾಮರ್ಥ್ಯ ಮತ್ತೊಮ್ಮೆ ಸಾಬೀತಾಗಿದೆ: ಸೇನೆ ಕಾರ್ಯಾಚರಣೆ ಬಗ್ಗೆ ಹೆಮ್ಮೆಯಿದೆ: ರಕ್ಷಣಾ ಸಚಿವ ರಾಜನಾಥ್ ಸಿಂಗ್

ನವದೆಹಲಿ: ಭಾರತೀಯ ಸೇನೆ ಶೌರ್ಯ, ಧೈರ್ಯವನ್ನು ಪ್ರದರ್ಶಿಸಿದೆ. ಭಯೋತ್ಪಾದನೆಯ ವಿರುದ್ಧ ಭಾರತದ ಕಾರ್ಯಾಚರಣೆ ಮುಂದುವರೆದಿದೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ತಿಳಿಸಿದ್ದಾರೆ.

ನವದೆಹಲಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್, ‘ಆಪರೇಷನ್ ಸಿಂಧೂರ್’ ಕಾರ್ಯಾಚರಣೆ ಮುಂದುವರೆದಿದೆ ಎಂದು ಹೇಳಿದರು.

ಆಪರೇಷನ್ ಸಿಂಧೂರ್ ಕಾರ್ಯಾಚರಣೆಯಲ್ಲಿ ಹಲವು ಉಗ್ರರನ್ನು ಹತ್ಯೆಗೈಯ್ಯಲಾಗಿದೆ. ಕಾರ್ಯಾಚರಣೆಯಲ್ಲಿ 100ಕ್ಕೂ ಹೆಚ್ಚು ಉಗ್ರರು ಹತರಾಗಿದ್ದಾರೆ. ಭಾರತೀಯ ಸೇನೆ ನಡೆಸಿದ ದಾಳಿಯಲ್ಲಿ ಒಬ್ಬನೇ ಒಬ್ಬ ನಾಗರಿಕ ಮೃತಪಟ್ಟಿಲ್ಲ. ಸೇನೆ ನಿಖರವಾದ ಮತ್ತು ಊಹಿಸಲು ಅಸಾಧ್ಯವಾದ ಕೆಲಸವನ್ನು ಮಾಡಿದೆ. ಭಾರತದ ತಾಳ್ಮೆಯನ್ನು ಪರೀಕ್ಷಿಸಬೇಡಿ ಎಂದು ಎಚ್ಚರಿಕೆ ನೀಡಿದ್ದಾರೆ.

ಮತ್ತಷ್ಟು ದಾಳಿಗೆ ಭಾರತೀಯ ಸೇನೆ ಸಿದ್ಧವಿದೆ. ಭಾರತೀಯ ಸೇನೆಯ ಸಾಮರ್ಥ್ಯ ಮತ್ತೊಮ್ಮೆ ಸಾಬೀತಾಗಿದೆ. ಸೇನೆ ನಡೆಸಿದ ಕಾರ್ಯಾಚರಣೆ ಬಗ್ಗೆ ಹೆಮ್ಮೆಯಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read