ನವದೆಹಲಿ: ಜಮ್ಮು-ಕಾಶ್ಮೀರದ ಪಹಲ್ಗಾಮ್ ನಲ್ಲಿ ಉಗ್ರರು ನಡೆಸಿರುವ ನರಮೇಧವನ್ನು ಸಹಿಸಲು ಸಾಧ್ಯವಿಲ್ಲ. ಉಗ್ರರಿಗೆ ಭಾರತ ತಕ್ಕ ಪ್ರತ್ಯುತ್ತರ ನೀಡಲಿದೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಖಡಕ್ ಸಂದೇಶ ರವಾನಿಸಿದ್ದಾರೆ.
ನವದೆಹಲಿಯಲ್ಲಿ ಮಾತನಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್, ಭಯೋತ್ಪಾದಕ ಕ್ರೌರ್ಯವನ್ನು ನಾವು ಸಹಿಸಲ್ಲ. ೨೮ ಜನರ ಹತ್ಯೆಗೆ ಪ್ರತಿಕಾರ ತೀರಿಸಿಕೊಳ್ಳುತ್ತೇವೆ. ಭಾರತವನ್ನು ಎಂದಿಗೂ ಹೆದರಿಸಲು ಸಾಧ್ಯವಿಲ್ಲ ಎಂದು ಗುಡುಗಿದ್ದಾರೆ.
ಪಹಲ್ಗಾಮ್ ನಲ್ಲಿ ನಡೆದ ದಾಳಿಗೆ ಉಗ್ರರು ತಕ್ಕ ಬೆಲೆ ತೆರಬೇಕಾಗುತ್ತದೆ. ಕ್ರೌರ್ಯಕ್ಕೆ ತಕ್ಕ ಉತ್ತರ ನೀಡಲಿದ್ದೇವೆ ಎಂದು ರಾಜನಾಥ್ ಸಿಂಗ್ ಎಚ್ಚರಿಸಿದ್ದಾರೆ.