HomeLatest Newsಮತ್ತೆ ಸಚಿವ ಸ್ಥಾನಕ್ಕೇರಲು ರಾಜಣ್ಣ ತಯಾರಿ, 10 ಸಾವಿರ ಜನರೊಂದಿಗೆ ದೆಹಲಿಯಲ್ಲಿ ಶಕ್ತಿ ಪ್ರದರ್ಶನ

ಮತ್ತೆ ಸಚಿವ ಸ್ಥಾನಕ್ಕೇರಲು ರಾಜಣ್ಣ ತಯಾರಿ, 10 ಸಾವಿರ ಜನರೊಂದಿಗೆ ದೆಹಲಿಯಲ್ಲಿ ಶಕ್ತಿ ಪ್ರದರ್ಶನ

ಬೆಂಗಳೂರು: ಸಚಿವ ಸಂಪುಟದಿಂದ ಅವಮಾನಕರ ರೀತಿಯಲ್ಲಿ ಪದಚ್ಯುತಗೊಂಡಿರುವ ಮಾಜಿ ಸಚಿವ ಕೆ.ಎನ್. ರಾಜಣ್ಣ ಆಕ್ರೋಶಗೊಂಡಿದ್ದು, ದೆಹಲಿಯಲ್ಲಿ ಶಕ್ತಿ ಪ್ರದರ್ಶನಕ್ಕೆ ಮುಂದಾಗಿದ್ದಾರೆ.

ತಮ್ಮಿಂದ ಯಾವುದೇ ವಿವರಣೆಯನ್ನು ಕೇಳದೆ ಏಕಾಏಕಿ ಸಂಪುಟದಿಂದ ವಜಾ ಮಾಡಿದ ತಮಗೊಂದು ನೀತಿ ಬೇರೆಯವರಿಗೆ ಒಂದು ನೀತಿಯೇ ಎಂದು ಎಐಸಿಸಿ ನಾಯಕರ ವಿರುದ್ಧ ಅಸಮಾಧಾನ ಹೊರಹಾಕಲು ದೆಹಲಿಯ ಜಂತರ್ ಮಂಥರ್ ನಲ್ಲಿ ಬೆಂಬಲಿಗರು ಮತ್ತು ವಾಲ್ಮೀಕಿ ಸಮುದಾಯದ ಶಕ್ತಿ ಪ್ರದರ್ಶನಕ್ಕೆ ಮುಂದಾಗಿದ್ದಾರೆ.

ದೆಹಲಿಯಲ್ಲಿ ಸಭೆ ನಡೆಸಲು ಸ್ಥಳೀಯ ಆಡಳಿತದ ಅನುಮತಿ ಕೋರಿದ್ದಾರೆ. ಜನರನ್ನು ಕರೆದೊಯ್ಯಲು ಎರಡು ವಿಶೇಷ ರೈಲುಗಳಿಗಾಗಿ ಮನವಿ ಮಾಡಿದ್ದಾರೆ ಎನ್ನಲಾಗಿದೆ. ಸುಮಾರು 10,000 ಜನರನ್ನು ಕರೆದುಕೊಂಡು ಹೋಗಿ ಶಕ್ತಿ ಪ್ರದರ್ಶನಕ್ಕೆ ಮುಂದಾಗಿದ್ದಾರೆ/ ಈಗಾಗಲೇ 7 ಸಾವಿರ ಮಂದಿ ಹೆಸರನ್ನು ನೋಂದಾಯಿಸಿದ್ದು. 15 ಮಠಾಧೀಶರು ರಾಜಣ್ಣ ಅವರಿಗೆ ಬೆಂಬಲ ಸೂಚಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬಿ. ನಾಗೇಂದ್ರ ಬಳಿಕ ರಾಜಣ್ಣ ಅವರನ್ನು ಸಂಪುಟದಿಂದ ಕೈ ಬಿಡುವ ಮೂಲಕ ವಾಲ್ಮೀಕಿ ನಾಯಕ ಸಮುದಾಯಕ್ಕೆ ಕಾಂಗ್ರೆಸ್ ಅನ್ಯಾಯ ಮಾಡಿದೆ ಎನ್ನುವ ಸಂದೇಶ ರವಾನಿಸಲು ರಾಜಣ್ಣ ಬೆಂಬಲಿಗರು ದೆಹಲಿಯಲ್ಲಿ ಶಕ್ತಿ ಪ್ರದರ್ಶನಕ್ಕೆ ಮುಂದಾಗಿದ್ದಾರೆ ಎನ್ನಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular