ದುಡುಕಿನ ನಿರ್ಧಾರ ಕೈಗೊಂಡ ವಿದ್ಯಾರ್ಥಿನಿ ವಿಷ ಸೇವಿಸಿ ಸಾವು: ಕೋಟಾದಲ್ಲಿ ಮುಂದುವರೆದ ನೀಟ್ ಆಕಾಂಕ್ಷಿಗಳ ಆತ್ಮಹತ್ಯೆ

ಕೋಟಾ: ರಾಜಸ್ಥಾನದ ಕೋಟಾದಲ್ಲಿ 16 ವರ್ಷದ NEET ಆಕಾಂಕ್ಷಿ ವಿಷ ಸೇವಿಸಿ ಸಾವನ್ನಪ್ಪಿದ್ದಾರೆ. ಉತ್ತರ ಪ್ರದೇಶದ 16 ವರ್ಷದ ವಿದ್ಯಾರ್ಥಿನಿ ಕೋಟಾ ಕೋಚಿಂಗ್ ಹಬ್‌ ನ ವಿಜ್ಞಾನ ನಗರ ಪ್ರದೇಶದ ತನ್ನ ಹಾಸ್ಟೆಲ್ ಕೋಣೆಯಲ್ಲಿ ವಿಷ ಸೇವಿಸಿ ಸೋಮವಾರ ಸಾವನ್ನಪ್ಪಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.

ವಿದ್ಯಾರ್ಥಿನಿಯನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೇ ಮೂರು ಗಂಟೆಗಳ ಬಳಿಕ ಆಕೆ ಸಾವನ್ನಪ್ಪಿದ್ದಾಳೆ ಎಂದು ಅವರು ತಿಳಿಸಿದ್ದಾರೆ.

ಉತ್ತರ ಪ್ರದೇಶದ ಮೌ ನಿವಾಸಿಯಾಗಿರುವ ವಿದ್ಯಾರ್ಥಿನಿ 12 ನೇ ತರಗತಿ ಓದುತ್ತಿದ್ದು, ಕೋಟಾದ ಕೋಚಿಂಗ್ ಇನ್‌ಸ್ಟಿಟ್ಯೂಟ್‌ನಲ್ಲಿ NEET-UG ಗೆ ತಯಾರಿ ನಡೆಸುತ್ತಿದ್ದಳು. ಇಲ್ಲಿನ ವಿಜ್ಞಾನನಗರ ಪ್ರದೇಶದ ಹಾಸ್ಟೆಲ್‌ನಲ್ಲಿ ವಾಸಿಸುತ್ತಿದ್ದಳು ಎಂದು ಡಿಎಸ್‌ಪಿ ಧರಂವೀರ್ ಸಿಂಗ್ ಹೇಳಿದ್ದಾರೆ.

ಸೋಮವಾರ ಮಧ್ಯಾಹ್ನ ಬಾಲಕಿ ತನ್ನ ಕೋಣೆಯಲ್ಲಿ ವಿಷಕಾರಿ ಪದಾರ್ಥ ಸೇವಿಸಿದ್ದಾಳೆ. ಆಕೆ ವಾಂತಿ ಮಾಡಿಕೊಳ್ಳಲು ಆರಂಭಿಸಿದಾಗ ಹಾಸ್ಟೆಲ್‌ನ ಇತರ ಹುಡುಗಿಯರು ಆಕೆಯನ್ನು ಆಸ್ಪತ್ರೆಗೆ ಕರೆದೊಯ್ದರು. ಮೂರು ಗಂಟೆಗಳ ನಂತರ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ ಎಂದು ಅವರು ಹೇಳಿದ್ದಾರೆ.

ಕೊಠಡಿಯಿಂದ ಯಾವುದೇ ಆತ್ಮಹತ್ಯೆ ಪತ್ರ ಪತ್ತೆಯಾಗಿಲ್ಲ, ನಂತರ ಅದನ್ನು ಸೀಲ್ ಮಾಡಲಾಗಿದೆ.. ಬಾಲಕಿಯ ಈ ಹೆಜ್ಜೆಯ ಹಿಂದಿನ ಕಾರಣ ಇನ್ನೂ ತಿಳಿದುಬಂದಿಲ್ಲ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಶವಾಗಾರದಲ್ಲಿ ಇರಿಸಲಾಗಿದ್ದು, ಘಟನೆಯ ಬಗ್ಗೆ ಮಾಹಿತಿ ಪಡೆದ ಪೋಷಕರು ಆಗಮಿಸಿದ ನಂತರ ನಡೆಸಲಾಗುವುದು ಎಂದು ಡಿಎಸ್ಪಿ ತಿಳಿಸಿದ್ದಾರೆ.

ಕೋಟಾದಲ್ಲಿ ಕೋಚಿಂಗ್ ವಿದ್ಯಾರ್ಥಿಯೊಬ್ಬ ಈ ವರ್ಷ ಆತ್ಮಹತ್ಯೆ ಮಾಡಿಕೊಂಡ 24ನೇ ಪ್ರಕರಣ ಇದಾಗಿದೆ. ಮತ್ತು ಈ ತಿಂಗಳು ಎರಡನೇ ಪ್ರಕರಣವಾಗಿದೆ. ಆಗಸ್ಟ್‌ ನಲ್ಲಿ ಆರು ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read