HomeIndiaಹೊಸ ವರ್ಷದ ಮೊದಲ ದಿನವೇ ದುರಂತ: ತಡರಾತ್ರಿ ಭೀಕರ ಸರಣಿ ಅಪಘಾತ: 10 ಜನ ಸಾವು

ಹೊಸ ವರ್ಷದ ಮೊದಲ ದಿನವೇ ದುರಂತ: ತಡರಾತ್ರಿ ಭೀಕರ ಸರಣಿ ಅಪಘಾತ: 10 ಜನ ಸಾವು

ಸಿಕಾರ್: ರಾಜಸ್ಥಾನದ ಸಿಕರ್ ಜಿಲ್ಲೆಯಲ್ಲಿ ಜನವರಿ 1 ರಂದು ಸಂಭವಿಸಿದ ಭಾರೀ ರಸ್ತೆ ಅಪಘಾತದಲ್ಲಿ ಕನಿಷ್ಠ 10 ಜನ ಸಾವನ್ನಪ್ಪಿದ್ದಾರೆ. ಆರು ಮಂದಿ ಗಾಯಗೊಂಡಿದ್ದಾರೆ.

ಮಜಿ ಸಾಹಬ್ ಕಿ ಧನಿ ಬಳಿ ಪಿಕಪ್ ಮತ್ತು ಬೈಕ್ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಪಿಕಪ್‌ ನಲ್ಲಿದ್ದ 7 ಜನ ಪ್ರಾಣ ಕಳೆದುಕೊಂಡಿದ್ದಾರೆ. ಪಿಕಪ್ ಅವರ ವಾಹನಕ್ಕೆ ಡಿಕ್ಕಿ ಹೊಡೆದ ನಂತರ ಬೈಕ್‌ ನಲ್ಲಿದ್ದ ಇಬ್ಬರು ವ್ಯಕ್ತಿಗಳು ಸಹ ಸಾವನ್ನಪ್ಪಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಖಂಡೆಲಾ ಪ್ರದೇಶದಲ್ಲಿ ಟ್ರಕ್, ಪಿಕಪ್ ವಾಹನ, ಬೈಕ್ ನಡುವೆ ಸರಣಿ ಅಪಘಾತ ಸಂಭವಿಸಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, 8 ಜನ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ಜನವರಿ 1 ರಂದು ಬೆಳಗ್ಗೆ ರಾಜಸ್ಥಾನದ ಕೋಟಾದಲ್ಲಿ ಸಂಭವಿಸಿದ ಅಪಘಾತದಲ್ಲಿ ದಂಪತಿಗಳು ಸಾವನ್ನಪ್ಪಿದ್ದಾರೆ ಮತ್ತು ಮೂವರು ಗಾಯಗೊಂಡಿದ್ದಾರೆ. ಅವರು ಪ್ರಯಾಣಿಸುತ್ತಿದ್ದ ಕಾರ್ ಮರಕ್ಕೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ಈ ಐವರೂ ಮಧ್ಯಪ್ರದೇಶದಿಂದ ದೇವಸ್ಥಾನಕ್ಕೆ ಭೇಟಿ ನೀಡಲು ರಾಜಸ್ಥಾನಕ್ಕೆ ತೆರಳುತ್ತಿದ್ದರು.

ಇನ್ನೊಂದು ಘಟನೆಯಲ್ಲಿ, ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯಲ್ಲಿ ಇಟ್ಟಿಗೆಗಳನ್ನು ಸಾಗಿಸುತ್ತಿದ್ದ ಟ್ರಕ್‌ಗೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಐವರು ಮೃತಪಟ್ಟು ಮತ್ತೊಬ್ಬರು ಗಾಯಗೊಂಡಿದ್ದಾರೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ರಾವತ್ಸರ್-ಸರ್ದರ್ಶಹರ್ ಹೆದ್ದಾರಿಯ ಬಿಸ್ರಾಸರ್ ಗ್ರಾಮದ ಬಳಿ ಶನಿವಾರ ತಡರಾತ್ರಿ ಈ ಅಪಘಾತ ಸಂಭವಿಸಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular