HomeIndiaಬೆತ್ತಲೆ ಮೆರವಣಿಗೆ: ದೌರ್ಜನ್ಯಕ್ಕೊಳಗಾದ ಮಹಿಳೆಗೆ ಸರ್ಕಾರಿ ನೌಕರಿ, 10 ಲಕ್ಷ ರೂ.: ಸಿಎಂ ಗೆಹ್ಲೋಟ್ ಘೋಷಣೆ

ಬೆತ್ತಲೆ ಮೆರವಣಿಗೆ: ದೌರ್ಜನ್ಯಕ್ಕೊಳಗಾದ ಮಹಿಳೆಗೆ ಸರ್ಕಾರಿ ನೌಕರಿ, 10 ಲಕ್ಷ ರೂ.: ಸಿಎಂ ಗೆಹ್ಲೋಟ್ ಘೋಷಣೆ

ರಾಜಸ್ಥಾನದ ಪ್ರತಾಪಗಢ ಜಿಲ್ಲೆಯಲ್ಲಿ ನಡೆದ ಘಟನೆಯೊಂದರಲ್ಲಿ 21 ವರ್ಷದ ಬುಡಕಟ್ಟು ಮಹಿಳೆಯನ್ನು ವಿವಸ್ತ್ರಗೊಳಿಸಿ ಗ್ರಾಮದಲ್ಲಿ ಮೆರವಣಿಗೆ ಮಾಡಲಾಗಿದ್ದು, ಸರ್ಕಾರದಿಂದ ಸಂತ್ರಸ್ತೆಗೆ ನೆರವು ಘೋಷಿಸಲಾಗಿದೆ.

ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಪ್ರತಾಪ್‌ ಗಢದ ಧರಿಯಾವಾಡದಲ್ಲಿ ಸಂತ್ರಸ್ತೆ ಮತ್ತು ಆಕೆಯ ಕುಟುಂಬವನ್ನು ಭೇಟಿ ಮಾಡಿದ್ದು, ತನಿಖೆಗಾಗಿ ವಿಶೇಷ ತನಿಖಾ ತಂಡವನ್ನು(ಎಸ್‌ಐಟಿ) ರಚಿಸಲಾಗಿದೆ. ಮಹಿಳೆಗೆ ಸರ್ಕಾರಿ ನೌಕರಿ ನೀಡಲಾಗಿದೆ. ಆಧಾರವಾಗಿ ಆಕೆಗೆ 10 ಲಕ್ಷ ರೂ. ಎಫ್.ಡಿ. ಇಡಲಾಗುವುದು ಎಂದು ಘೋಷಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈ ಪ್ರಕರಣದಲ್ಲಿ, ಎಸ್‌ಐಟಿ ರಚಿಸಲಾಗಿದೆ, 11 ಜನರನ್ನು ಬಂಧಿಸಲಾಗಿದೆ, ನಾನು ಸಂತ್ರಸ್ತೆಯ ಕುಟುಂಬದೊಂದಿಗೆ ಮಾತನಾಡಿದ್ದೇನೆ. ಸರ್ಕಾರವು ನಿಮ್ಮೊಂದಿಗೆ ನಿಂತಿದೆ. ನ್ಯಾಯ ಸಿಗುತ್ತದೆ ಎಂದು ಅವರಿಗೆ ಭರವಸೆ ನೀಡಿದ್ದೇನೆ. ನಾನು ಆಕೆಗೆ ಸರ್ಕಾರಿ ಉದ್ಯೋಗವನ್ನು ನೀಡಿದ್ದೇನೆ. ಮೂವರು ಸಹೋದರಿಯರು ಮತ್ತು ಒಬ್ಬ ಚಿಕ್ಕ ಸಹೋದರನನ್ನು ಒಳಗೊಂಡಿರುವ ಆಕೆಯ ಕುಟುಂಬವನ್ನು ಪೋಷಿಸಬಹುದು. ಆಕೆಯ ತಂದೆ ಕೂಲಿ ಕೆಲಸ ಮಾಡುತ್ತಾರೆ. ಮಹಿಳೆಗೆ 10 ಲಕ್ಷ ರೂ. ಸ್ಥಿರ ಠೇವಣಿ ಮಾಡುತ್ತೇವೆ ಎಂದು ಗೆಹ್ಲೋಟ್ ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular