HomeIndiaBREAKING: ಆಟವಾಡುತ್ತಾ ಕೊಳೆವೆ ಬಾವಿಗೆ ಬಿದ್ದ 5 ವರ್ಷದ ಬಾಲಕ: ರಕ್ಷಣೆಗೆ NDRF ಹರಸಾಹಸ

BREAKING: ಆಟವಾಡುತ್ತಾ ಕೊಳೆವೆ ಬಾವಿಗೆ ಬಿದ್ದ 5 ವರ್ಷದ ಬಾಲಕ: ರಕ್ಷಣೆಗೆ NDRF ಹರಸಾಹಸ

ರಾಜಸ್ಥಾನದ ದೌಸಾ ಜಿಲ್ಲೆಯಲ್ಲಿ 5 ವರ್ಷದ ಬಾಲಕ ಕೊಳವೆ ಬಾವಿಗೆ ಬಿದ್ದಿದ್ದಾನೆ. ಸುಮಾರು 150 ಅಡಿ ಆಳದಲ್ಲಿ ಬಿದ್ದಿರುವ ಬಾಲಕನ ರಕ್ಷಣೆಗೆ ಹರಸಾಹಸ ನಡೆಸಲಾಗಿದೆ.

ಕೊಳವೆ ಬಾವಿಗೆ ಆಮ್ಲಜನಕ ಪೂರೈಕೆ ಮಾಡಲಾಗುತ್ತಿದ್ದು, ಕೊಳವೆ ಬಾವಿಗೆ ಸಮನಾಂತರವಾಗಿ ಗುಂಡಿ ತೋಡುವ ಪ್ರಕ್ರಿಯೆ ನಡೆಸಿದ್ದು, ಮಗುವನ್ನು ರಕ್ಷಿಸಲು ಕಾರ್ಯಾಚರಣೆ ನಡೆಸಲಾಗಿದೆ.

ದೌಸಾ ಜಿಲ್ಲೆಯ ಕಾಲಿಖಾಡ್ ಗ್ರಾಮದಲ್ಲಿ ಐದು ವರ್ಷದ ಬಾಲಕ ಆಟವಾಡುತ್ತಿದ್ದ ವೇಳೆ ತೆರೆದ ಬೋರ್‌ವೆಲ್‌ಗೆ ಬಿದ್ದಿದೆ. ಮಗು ಬಿದ್ದ ಬೋರ್‌ವೆಲ್ 150 ಅಡಿ ಆಳವಿತ್ತು ಎನ್ನಲಾಗಿದೆ. ಘಟನೆ ಬಗ್ಗೆ ಮಾಹಿತಿ ಲಭಿಸಿದ ತಕ್ಷಣ ಎನ್‌ಡಿಆರ್‌ಎಫ್ ತಂಡ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ಆರಂಭಿಸಿದೆ. ಇದೇ ವೇಳೆ ಶಾಸಕ ಡಿ.ಸಿ.ಬೈರವ ಕೂಡ ಸ್ಥಳದಲ್ಲಿಯೇ ಇದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸದ್ಯ ಬೋರ್‌ವೆಲ್‌ನಲ್ಲಿರುವ ಮಗುವಿಗೆ ಪೈಪ್‌ ಮೂಲಕ ಆಮ್ಲಜನಕ ನೀಡಲಾಗುತ್ತಿದೆ. ಸ್ಥಳದಲ್ಲಿ ಎನ್‌ಡಿಆರ್‌ಎಫ್ ತಂಡ ಮತ್ತು ಆಡಳಿತವಿದೆ. 5 ಜೆಸಿಬಿ ಯಂತ್ರಗಳು ಮತ್ತು 3 ಟ್ರ್ಯಾಕ್ಟರ್‌ಗಳ ಸಹಾಯದಿಂದ ಅಗೆಯುವ ಕೆಲಸ ನಡೆಯುತ್ತಿದೆ.

 

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular