HomeIndiaರಾಜಸ್ಥಾನದ ಕೋಟಾದಲ್ಲಿ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ : ನಾಲ್ವರು ಆರೋಪಿಗಳಿಗೆ ನ್ಯಾಯಾಂಗ ಬಂಧನ

ರಾಜಸ್ಥಾನದ ಕೋಟಾದಲ್ಲಿ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ : ನಾಲ್ವರು ಆರೋಪಿಗಳಿಗೆ ನ್ಯಾಯಾಂಗ ಬಂಧನ

ಕೋಟಾ: ಸಹಪಾಠಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಆರೋಪದ ಮೇಲೆ ಕೋಚಿಂಗ್ ಸಂಸ್ಥೆಯ ನಾಲ್ವರು ವಿದ್ಯಾರ್ಥಿಗಳನ್ನು ಕೋಟಾದ ವಿಶೇಷ ನ್ಯಾಯಾಲಯವು ಮಾರ್ಚ್ 1 ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

ಆರೋಪಿಗಳ ಗುರುತನ್ನು ರಹಸ್ಯವಾಗಿಡಲಾಗಿದೆ. ಫೆಬ್ರವರಿ 10 ರಂದು ಈ ಘಟನೆ ನಡೆದಿದ್ದು, ಸಂತ್ರಸ್ತೆ ಇಲ್ಲಿನ ಕೋಚಿಂಗ್ ಸೆಂಟರ್ನಲ್ಲಿ ರಾಷ್ಟ್ರೀಯ ಅರ್ಹತಾ ಪ್ರವೇಶ ಪರೀಕ್ಷೆ (ನೀಟ್) ಗಾಗಿ ತಯಾರಿ ನಡೆಸುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಬಾಲಕಿಯ ದೂರಿನ ಆಧಾರದ ಮೇಲೆ, ಭಾರತೀಯ ದಂಡ ಸಂಹಿತೆ ಮತ್ತು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆಯ ಸೆಕ್ಷನ್ಗಳ ಅಡಿಯಲ್ಲಿ ನಾಲ್ವರ ವಿರುದ್ಧ ಮಂಗಳವಾರ ಸಾಮೂಹಿಕ ಅತ್ಯಾಚಾರ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular