HomeIndiaBREAKING: ಕಾರ್ -ಟ್ರಕ್ ಮುಖಾಮುಖಿ ಡಿಕ್ಕಿ: ಭೀಕರ ಅಪಘಾತದಲ್ಲಿ 9 ಮಂದಿ ಸಾವು

BREAKING: ಕಾರ್ -ಟ್ರಕ್ ಮುಖಾಮುಖಿ ಡಿಕ್ಕಿ: ಭೀಕರ ಅಪಘಾತದಲ್ಲಿ 9 ಮಂದಿ ಸಾವು

ರಾಜಸ್ಥಾನದ ಕರೌಲಿಯಲ್ಲಿ ಕಾರ್ ಮತ್ತು ಟ್ರಕ್ ನಡುವೆ ಡಿಕ್ಕಿಯಾಗಿ 9 ಮಂದಿ ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ ಕಾರ್ ನಲ್ಲಿದ್ದ ನಾಲ್ವರು ಗಾಯಗೊಂಡಿದ್ದು, ಅವರನ್ನು ಕರೌಲಿ ಜಿಲ್ಲಾ ಆಸ್ಪತ್ರೆಗೆ ರವಾನಿಸಲಾಗಿದೆ.

ಕರೌಲಿ-ಮಂಡ್ರಾಯಲ್ ರಸ್ತೆಯ ದುಂಡಾಪುರ ತಿರುವಿನ ಬಳಿ ಸಂಜೆ ವೇಗವಾಗಿ ಬಂದ ಕಾರ್ ಮತ್ತು ಟ್ರಕ್ ಮುಖಾಮುಖಿ ಡಿಕ್ಕಿಯಾಗಿ ಈ ಅಪಘಾತ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಅಪಘಾತದಲ್ಲಿ ಕಾರಿನ ಮುಂಭಾಗ ಸಂಪೂರ್ಣ ಜಖಂಗೊಂಡಿದೆ. ಡಿಕ್ಕಿಯ ಶಬ್ದದಿಂದ ಗಾಬರಿಗೊಂಡ ಸ್ಥಳೀಯರು ಸ್ಥಳದಲ್ಲಿ ಜಮಾಯಿಸಿ ಪೊಲೀಸರಿಗೆ ಮತ್ತು ಆಂಬುಲೆನ್ಸ್‌ಗೆ ಮಾಹಿತಿ ನೀಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪೊಲೀಸರು ಎಲ್ಲಾ ಗಾಯಾಳುಗಳನ್ನು ಕರೌಲಿ ಜಿಲ್ಲಾ ಆಸ್ಪತ್ರೆಗೆ ಕರೆದೊಯ್ದರು, ಅಲ್ಲಿ ವೈದ್ಯರು ಒಂಬತ್ತು ಜನರು ಸಾವನ್ನಪ್ಪಿದ್ದಾರೆ ಎಂದು ಘೋಷಿಸಿದ್ದಾರೆ. ಗಾಯಗೊಂಡ ನಾಲ್ವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ.

ಅಪಘಾತದ ಸುದ್ದಿ ತಿಳಿಯುತ್ತಿದ್ದಂತೆ ಜಿಲ್ಲಾಧಿಕಾರಿ ನೀಲಭ್ ಸಕ್ಸೇನಾ ಮತ್ತು ಎಸ್ಪಿ ಬ್ರಿಜೇಶ್ ಜ್ಯೋತಿ ಉಪಾಧ್ಯಾಯ ಅವರು ಅಪಘಾತದ ಸ್ಥಳಕ್ಕೆ ಆಗಮಿಸಿ ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆಗಳನ್ನು ಪರಿಶೀಲಿಸಿದರು. ಎಡಿಎಂ ರಾಜವೀರ್ ಚೌಧರಿ ಅವರು ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular