ಜೈಪುರ: ಭಾರಿ ಮಳೆಯಿಂದಾಗಿ ಶಾಲೆಯ ಮೇಲ್ಛಾವಣಿ ಕುಸಿದು ಬಿದ್ದ ದುರಂತಕ್ಕೆ ಸಂಬಂಧಿಸಿದಂತೆ ಸಾವಿನ ಸಂಖ್ಯೆ ಮತ್ತಷ್ಟು ಏರಿಕೆಯಾಗಿದೆ. ರಾಜಸ್ಥಾನದ ಝಲ್ವಾರ್ ನಲ್ಲಿ ಈ ಘಟನೆ ನಡೆದಿದೆ.
ಶಾಲೆ ಕಟ್ಟಡ ಕುಸಿತ ಪ್ರಕರಣದಲ್ಲಿ ವಿದ್ಯಾರ್ಥಿಗಳು, ಶಿಕ್ಷಕಿ ಸೇರಿ 7 ಜನರು ಮೃತಪತಟ್ಟಿದ್ದಾರೆ. ಹಲವರು ಅವಶೇಷಗಳ ಅಡಿಯಲ್ಲಿ ಸಿಲುಕಿಕೊಂಡಿದ್ದಾರೆ. ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ.
ದುರಂತದಲ್ಲಿ ಈವರೆಗೆ 6 ವಿದ್ಯಾರ್ಥಿಗಳು, ಓರ್ವ ಶಿಕ್ಷಕಿ ಸೇರಿ ಏಳು ಜನರು ಮೃತಪಟ್ಟಿದ್ದಾರೆ. ಘಟನೆ ವೇಳೆ ಶಾಲೆಯಲ್ಲಿ 32 ವಿದ್ಯಾರ್ಥಿಗಳು ಇದ್ದರು. ಹಲವು ವಿದ್ಯಾರ್ಥಿಗಳು ಅವಶೇಷಗಳ ಅಡಿಯಲ್ಲಿ ಸಿಲುಕಿರುವ ಶಂಕೆ ಇದ್ದು, ರಕ್ಷಣಾ ಕಾರ್ಯಾಚರಣೆ ನಡೆಸಲಾಗುತ್ತಿದೆ.