HomeIndiaರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ಆರು ಮಂದಿ ಸಾವು

ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ಆರು ಮಂದಿ ಸಾವು

ಸವಾಯಿ ಮಾಧೋಪುರ: ರಾಜಸ್ಥಾನದ ಸವಾಯಿ ಮಾಧೋಪುರ ಜಿಲ್ಲೆಯಲ್ಲಿ ಭಾನುವಾರ ಕಾರ್ ಗೆ ಮತ್ತೊಂದು ವಾಹನ ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ ಆರು ಮಂದಿ ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ದೆಹಲಿ-ಮುಂಬೈ ಎಕ್ಸ್ ಪ್ರೆಸ್ ವೇಯಲ್ಲಿನ ಬನಾಸ್ ನದಿಯ ಸೇತುವೆ ಬಳಿ ಅಪಘಾತ ಸಂಭವಿಸಿದೆ.

ಪೊಲೀಸರ ಪ್ರಕಾರ, ಕುಟುಂಬವು ಪ್ರಾರ್ಥನೆ ಸಲ್ಲಿಸಲು ಸವಾಯಿ ಮಾಧೋಪುರದ ಗಣೇಶ ದೇವಸ್ಥಾನಕ್ಕೆ ಹೋಗುತ್ತಿತ್ತು. ಅಪರಿಚಿತ ವಾಹನವೊಂದು ಅವರ ಕಾರ್ ಗೆ ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ ಆರು ಮಂದಿ ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿದ್ದಾರೆ ಎಂದು ಬೋನ್ಲಿ ಪೊಲೀಸ್ ಠಾಣೆಯ ಸಬ್ ಇನ್ಸ್‌ಪೆಕ್ಟರ್ ಧರಂಪಾಲ್ ಸಿಂಗ್ ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಅಪಘಾತದಲ್ಲಿ ದುರಂತವಾಗಿ ಸಾವನ್ನಪ್ಪಿದವರಲ್ಲಿ ಮನೀಶ್ ಶರ್ಮಾ ಮತ್ತು ಅವರ ಪತ್ನಿ ಅನಿತಾ, ಕೈಲಾಶ್ ಶರ್ಮಾ ಮತ್ತು ಅವರ ಪತ್ನಿ ಸಂತೋಷ್ ಮತ್ತು ಸತೀಶ್ ಶರ್ಮಾ ಮತ್ತು ಅವರ ಪತ್ನಿ ಪೂನಂ ಸೇರಿದ್ದಾರೆ. ಗಾಯಗೊಂಡಿರುವ ಮಕ್ಕಳಾದ ಮನನ್ ಮತ್ತು ದೀಪಾಲಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಕಾರ್ ಗೆ ಡಿಕ್ಕಿ ಹೊಡೆದ ವಾಹನದ ಪತ್ತೆಗೆ ಪೊಲೀಸರು ಹುಡುಕಾಟ ಆರಂಭಿಸಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ಕುಟುಂಬಸ್ಥರು ಬಂದ ನಂತರ ಮರಣೋತ್ತರ ಪರೀಕ್ಷೆ ನಡೆಸಲಾಗುವುದು.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular