HomeIndiaದುಷ್ಕರ್ಮಿಗಳ ಕಲ್ಲು ತೂರಾಟದಲ್ಲಿ ಎರಡು ವರ್ಷದ ಮಗು ಸಾವು

ದುಷ್ಕರ್ಮಿಗಳ ಕಲ್ಲು ತೂರಾಟದಲ್ಲಿ ಎರಡು ವರ್ಷದ ಮಗು ಸಾವು

ಡುಂಗರ್‌ಪುರ: ರಾಜಸ್ಥಾನದ ಡುಂಗರ್‌ಪುರ ಪ್ರದೇಶದಲ್ಲಿ ದುಷ್ಕರ್ಮಿಗಳು ನಡೆಸಿದ ಕಲ್ಲು ತೂರಾಟದಲ್ಲಿ ಎರಡು ವರ್ಷದ ಮಗು ಸಾವನ್ನಪ್ಪಿರುವ ದಾರುಣ ಘಟನೆ ಶನಿವಾರ ನಡೆದಿದೆ.

ಚೋರಾಸಿ ಠಾಣೆಯ ಪ್ರಭಾರಿ ಅಮೃತಲಾಲ್ ಪ್ರಕಾರ, ಮೃತ ಬಾಲಕ ತನ್ನ ಹೆತ್ತವರೊಂದಿಗೆ ಬೈಕ್‌ನಲ್ಲಿ ಮದುವೆ ಮುಗಿಸಿ ಹಿಂತಿರುಗುತ್ತಿದ್ದಾಗ ಪೋಹ್ರಿ ಖತುರತ್ ಬಳಿ ಕೆಲವು ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದ್ದರಿಂದ ತೀವ್ರ ಪೆಟ್ಟಾಗಿ ಮೃತಪಟ್ಟಿದ್ದಾನೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮದುವೆ ಮುಗಿಸಿ ಮನೆಯವರು ವಾಪಸ್ಸಾಗುತ್ತಿದ್ದಾಗ ನಿನ್ನೆ ದುಷ್ಕರ್ಮಿಗಳು ಬೈಕ್ ತಡೆದು ಕಲ್ಲು ತೂರಾಟ ನಡೆಸಿದ್ದು, ಮಗುವಿನ ತಲೆಗೆ ಕಲ್ಲು ತಗುಲಿ ಮಗು ಸಾವನ್ನಪ್ಪಿದೆ. ಪೊಲೀಸರು ಕೊಲೆ ಪ್ರಕರಣ ದಾಖಲಿಸಿಕೊಂಡು ದುಷ್ಕರ್ಮಿಗಳಿಗಾಗಿ ಹುಡುಕಾಟ ಆರಂಭಿಸಿದ್ದಾರೆ ಎಂದು ಅಮೃತಲಾಲ್ ತಿಳಿಸಿದ್ದಾರೆ. .

ಗಂಭೀರ ಸ್ಥಿತಿಯಲ್ಲಿದ್ದ ಮಗುವನ್ನು ಪೋಹ್ರಿ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಮೃತಪಟ್ಟಿದೆ. ಮೃತರ ಮರಣೋತ್ತರ ಪರೀಕ್ಷೆ ನಡೆಸಿ ಶವವನ್ನು ಕುಟುಂಬದವರಿಗೆ ಹಸ್ತಾಂತರಿಸಲಾಗಿದೆ. ಹೆಚ್ಚಿನ ತನಿಖೆ ನಡೆಯುತ್ತಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular