ಜೈಪುರ: ಪಿಕಪ್ ವಾಹನಕ್ಕೆ ಕಾರು ಡಿಕ್ಕಿಯಾಗಿ ಸಂಭವಿಸಿದ ಭೀಕರ ಅಪಘಾತದಲ್ಲಿ ಸ್ಥಳದಲ್ಲೇ ನಾಲ್ವರು ಸಾವನ್ನಪ್ಪಿರುವ ಘಟನೆ ರಾಜಸ್ಥಾನದಲ್ಲಿ ನಡೆದಿದೆ.
ರಾಜಸ್ಥಾನದ ಬರಾನ್ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ಕಾರಿನಲ್ಲಿದ್ದ ಇಬ್ಬರು ಪುರುಷರು, ಇಬ್ಬರು ಮಹಿಳೆಯರು ಸೇರಿ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರು ಉತ್ತರ ಪ್ರದೇಶದ ಲಖನೌ ನಗರ ನಿವಾಸಿಗಳು ಎಂದು ತಿಳಿದುಬಂದಿದೆ.
ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.