ಜೋಧಪುರ: ಟ್ರ್ಯಾಕ್ಟರ್ ಹಾಗೂ ಗೂಡ್ಸ್ ವಾಹನಗಳ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಾಗಿ ಸಂಭವಿಸಿದ ಭೀಕರ ಅಪಘಾತದಲ್ಲಿ 6 ಜನರು ಮೃತಪಟ್ಟಿರುವ ಘಟನೆ ನಡೆದಿದೆ.
ರಾಜಸ್ಥಾನದ ಜೋಧಪುರದಲ್ಲಿ ಈ ದುರಂತ ಸಂಭವಿಸಿದೆ. ಸ್ಥಳದಲ್ಲೇ 6 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳದಲ್ಲಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
