HomeIndiaBIG NEWS: ರಾಜಸ್ಥಾನ ಚುನಾವಣೆ: ಸಿಎಂ ಸ್ಥಾನಕ್ಕೆ ಅಶೋಕ್ ಗೆಹ್ಲೋಟ್ ರಾಜೀನಾಮೆ

BIG NEWS: ರಾಜಸ್ಥಾನ ಚುನಾವಣೆ: ಸಿಎಂ ಸ್ಥಾನಕ್ಕೆ ಅಶೋಕ್ ಗೆಹ್ಲೋಟ್ ರಾಜೀನಾಮೆ

ಜೈಪುರ: ರಾಜಸ್ಥಾನ ವಿಧಾನಸಭಾ ಚುನಾವಣೆಯಲ್ಲಿ ಆಡಳಿತಾರೂಢ ಕಾಂಗ್ರೆಸ್ ಹಿನಾಯವಾಗಿ ಸೋಲನುಭಸಿದ್ದು, ಬಿಜೆಪಿ ಭರ್ಜರಿ ಗೆಲುವು ಸಾಧಿಸಿದೆ.

ಕಾಂಗ್ರೆಸ್ ಸೋಲು ಹಿನ್ನೆಲೆಯಲ್ಲಿ ರಾಜಸ್ಥಾನ ಮುಖ್ಯಮಂತ್ರಿ ಸ್ಥಾನಕ್ಕೆ ಅಶೋಕ್ ಗೆಹ್ಲೋಟ್ ರಾಜೀನಾಮೆ ನೀಡಿದ್ದಾರೆ. ರಾಜಭವನಕ್ಕೆ ತೆರಳಿ ರಾಜ್ಯಪಾಲರಿಗೆ ತಮ್ಮ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ನಿರ್ಗಮಿತ ಸಿಎಂ ಅಶೋಕ್ ಗೆಹ್ಲೋಟ್, ರಾಜಸ್ಥಾನದಲ್ಲಿ ಕಾಂಗ್ರೆಸ್ ಗೆ ಸೋಲುಂಟಾಗಿದೆ. ಮತದಾರರು ನೀಡಿದ ತೀರ್ಪನ್ನು ಗೌರವದಿಂದ ಸ್ವೀಕರಿಸುತ್ತೇವೆ ಎಂದು ತಿಳಿಸಿದ್ದಾರೆ.

ರಾಜಸ್ಥಾನದಲ್ಲಿ ಬಿಜೆಪಿ 114 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದೆ. ಕಾಂಗ್ರೆಸ್ 71 ಹಾಗೂ ಇತರೆ 14 ಕ್ಷೇತ್ರಗಳಲ್ಲಿ ಮುನ್ನಡೆ ಪಡೆದಿವೆ.

For Latest News Updates, Join Our Whatsapp Community🚩
RELATED ARTICLES

Most Popular