ಬೆಂಗಳೂರು: ಮಚ್ಚು ಹಿಡಿದು ರೀಲ್ಸ್ ಮಾಡಿ ಜೈಲು ಸೇರಿದ್ದ ಬಿಗ್ ಮಾಸ್ ಮಾಜಿ ಸ್ಪರ್ಧಿ ರಜತ್ ಕಿಶನ್ ಗೆ ಜಾಮೀನು ಮಂಜೂರಾಗಿದೆ.
ಮಚ್ಚು ಹಿಡಿದು ರೀಲ್ಸ್ ಮಾಡಿ ಜೈಲು ಸೇರಿದ್ದ ಪ್ರಕರಣದಲ್ಲಿ ಷರತ್ತುಬದ್ಧ ಜಾಮೀನು ಮೇಲೆ ಬಿಡುಗಡೆಯಾಗಿದ್ದ ರಜತ್ ಕಿಶನ್, ಕೋರ್ಟ್ ಆದೇಶ ಉಲ್ಲಂಘಿಸಿ, ವಿಚಾರಣೆಗೆ ಹಾಜರಾಗದೇ ನಿರ್ಲಕ್ಷ್ಯ ಮಾಡಿದ್ದಕ್ಕೆ ಮತ್ತೆ ಜೈಲು ಪಾಲಾಗಿದ್ದರು.
ಇದೀಗ ಬೆಂಗಳೂರಿನ 24ನೇ ಎಸಿಎಂಎಂ ಕೋರ್ಟ್ ರಜತ್ ಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದ್ದು, ಸಂಜೆ ವೇಳೆಗೆ ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆಯಾಗಲಿದ್ದಾರೆ.