HomeIndiaಕೇರಳ ಬಿಜೆಪಿ ಅಧ್ಯಕ್ಷರಿಗೆ ಅದೇ ಹೆಸರಿನ ವ್ಯಕ್ತಿ ಎದುರಾಳಿ!

ಕೇರಳ ಬಿಜೆಪಿ ಅಧ್ಯಕ್ಷರಿಗೆ ಅದೇ ಹೆಸರಿನ ವ್ಯಕ್ತಿ ಎದುರಾಳಿ!

ಕೇಂದ್ರದ ಮಾಜಿ ಸಚಿವ, ಕೇರಳ ಬಿಜೆಪಿ ರಾಜ್ಯಾಧ್ಯಕ್ಷ ರಾಜೀವ್ ಚಂದ್ರಶೇಖರ್ ನೇಮಂ ಕ್ಷೇತ್ರದಿಂದ ಕೇರಳ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಿದ್ದಾರೆ. ಆದರೆ ಅದೇ ಹೆಸರಿನ ಅಭ್ಯರ್ಥಿ ಅವರ ಎದುರಾಳಿಯಾಗಿದ್ದು, ಬಿಜೆಪಿ ಇದನ್ನು ಟೀಕಿಸಿದೆ.

140 ಸದಸ್ಯ ಬಲದ ಕೇರಳ ವಿಧಾನಸಭೆ ಚುನಾವಣೆಗೆ ಏಪ್ರಿಲ್ 9ರಂದು ಚುನಾವಣೆ ನಡೆಯಲಿದೆ, ಮೇ 4ರಂದು ಫಲಿತಾಂಶ ಪ್ರಕಟವಾಗಲಿದೆ. ನೇಮಂ ಕ್ಷೇತ್ರದಲ್ಲಿ ರಾಜೀವ್ ಚಂದ್ರಶೇಖರ್ ಬಿಜೆಪಿ ಅಭ್ಯರ್ಥಿ.

 ಆದರೆ ಕ್ಷೇತ್ರದಲ್ಲಿ ಸಿಪಿಎಂ ಅದೇ ಹೆಸರಿನ ಅಭ್ಯರ್ಥಿಯನ್ನು ಕಣಕ್ಕಿಳಿಸಿದ್ದು, ಬಿಜೆಪಿ ಅಸಮಾಧಾನಕ್ಕೆ ಕಾರಣವಾಗಿದೆ. ಚುನಾವಣೆಗಳಲ್ಲಿ ಇದು ಸಾಮಾನ್ಯವಾಗಿದೆ. ಮತಗಳನ್ನು ಚದುರಿಸಲು ಪಕ್ಷಗಳು ಈ ಕಾರ್ಯತಂತ್ರ ಮಾಡುತ್ತವೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕ್ಷೇತ್ರದಲ್ಲಿ ಸಚಿವ ವಿ.ಶಿವನ್ ಕುಟ್ಟಿ ಸಿಪಿಎಂ ಪಕ್ಷದ ಅಭ್ಯರ್ಥಿಯಾಗಿದ್ದಾರೆ. ಆದರೆ ಪಕ್ಷ ಪಕ್ಷದ ಶಾಖಾ ಕಾರ್ಯದರ್ಶಿಯಾದ ರಾಜೀವ್ ಕುಮಾರ್ ಜಿ. ಅವರನ್ನು ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಸಿ, ಬಿಜೆಪಿ ರಾಜ್ಯಾಧ್ಯಕ್ಷರಿಗೆ ಸವಾಲು ಹಾಕಿದೆ.

ಪಕ್ಷದ ಶಾಖಾ ಕಾರ್ಯದರ್ಶಿಯನ್ನು ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಸುವ ಮೂಲಕ ಸಿಪಿಎಂ ಕೀಳು ಮಟ್ಟದ ರಾಜಕೀಯವನ್ನು ಮಾಡುತ್ತಿದೆ ಎಂದು ಕೇರಳ ಬಿಜೆಪಿ ಘಟಕ ಆರೋಪ ಮಾಡಿದೆ.

ಒಂದೇ ಹೆಸರಿನ ಅಭ್ಯರ್ಥಿಗಳು: ಚುನಾವಣೆಯಲ್ಲಿ ಒಂದೇ ಕ್ಷೇತ್ರದಲ್ಲಿ ಒಂದೇ ಹೆಸರಿನ ಅಭ್ಯರ್ಥಿಗಳ ಕಣಕ್ಕಿಳಿಯುತ್ತಿರುವುದು ಇದೇ ಮೊದಲಲ್ಲ. ಸಿಎಂ ಪಿಣರಾಯಿ ವಿಜಯನ್ ವಿರುದ್ಧ ಎ.ಎಂ.ವಿಜಯನ್ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದಾರೆ.

ಬೇಫೋರ್ ಕ್ಷೇತ್ರದಲ್ಲಿ ಪಿಣರಾಯಿ ವಿಜಯನ್ ಅಳಿಯ ಪಿ.ಎ.ಮೊಹಮ್ಮದ್ ರಿಯಾಜ್ ಸಿಪಿಎಂನಿಂದ ಕಣದಲ್ಲಿದ್ದಾರೆ. ಕ್ಷೇತ್ರದಲ್ಲಿ ಇದೇ ಹೆಸರಿನ ಇದೇ ಹೆಸರಿನ ನಾಲ್ವರು ಪಕ್ಷೇತರ ಅಭ್ಯರ್ಥಿಗಳು ಕಣದಲ್ಲಿದ್ದು, ಚುನಾವಣೆ ಕುತೂಹಲಕ್ಕೆ ಕಾರಣವಾಗಿದೆ.

ಕೇರಳ ವಿಧಾನಸಭೆ ಚುನಾವಣೆ ಪ್ರಚಾರಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಪಾಲಕ್ಕಾಡ್‌ಗೆ ಆಗಮಿಸಲಿದ್ದಾರೆ. ರಾಜ್ಯದ ಚುನಾವಣೆ ಸಹ ಉಸ್ತುವಾರಿ ಬೆಂಗಳೂರು ಉತ್ತರ ಕ್ಷೇತ್ರದ ಸಂಸದೆ, ಕೇಂದ್ರ ಸಚಿವ ಶೋಭಾ ಕರಂದ್ಲಾಜೆ.

ಪಾಲಕ್ಕಾಡ್‌ನಲ್ಲಿ ನಡೆಯಲಿರುವ ನರೇಂದ್ರ ಮೋದಿ ರ‍್ಯಾಲಿಯ ಪೂರ್ವ ಸಿದ್ಧತೆಗಳನ್ನು ಅವರು ಪರಿಶೀಲಿಸಿದ್ದಾರೆ. ಪ್ರಭಾರಿಗಳಾದ ಎನ್.ಕೆ. ರವಿಕುಮಾರ್, ಉದಯ ಕುಮಾರ್ ಶೆಟ್ಟಿ ಪ್ರಶಾಂತ್ ಶಿವನ್ ಮುಂತಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

For Latest News Updates, Join Our Whatsapp Community🚩
Abinandan
Abinandan
ನಿವೇದಿತಾ ಬಿ.ಎ.. ಬಿ.ಎಡ್ ಪದವೀಧರರು. ಡಿಜಿಟಲ್ ಪತ್ರಿಕೋದ್ಯಮದಲ್ಲಿ ಕಳೆದ 4 ವರ್ಷಗಳಿಂದ ಸಕ್ರಿಯರಾಗಿದ್ದಾರೆ. Revenufacts ವೆಬ್‌ಸೈಟ್‌ನಲ್ಲಿ 3 ವರ್ಷ ಹಾಗೂ ಕರುನಾಡು ಸುದ್ದಿ ಮಾಧ್ಯಮದಲ್ಲಿ 1 ವರ್ಷ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ. ಆರೋಗ್ಯ, ವಾಣಿಜ್ಯ, ಲೈಫ್‌ಸ್ಟೈಲ್ ವಿಭಾಗದಲ್ಲಿ ವಿಶೇಷ ಪರಿಣತಿ ಹೊಂದಿದ್ದಾರೆ. Nivedita is a skilled digital content creator with a strong academic background in B.A. and B.Ed. 4 years of experience in digital journalism.
RELATED ARTICLES

LEAVE A REPLY

Please enter your comment!
Please enter your name here

Most Popular