HomeLatest NewsBREAKING: ಪೌರಾಯುಕ್ತಗೆ ಧಮ್ಕಿ ಪ್ರಕರಣ: ರಾಜೀವ್ ಗೌಡಗೆ ಷರತ್ತುಬದ್ಧ ಜಾಮೀನು ಮಂಜೂರು

BREAKING: ಪೌರಾಯುಕ್ತಗೆ ಧಮ್ಕಿ ಪ್ರಕರಣ: ರಾಜೀವ್ ಗೌಡಗೆ ಷರತ್ತುಬದ್ಧ ಜಾಮೀನು ಮಂಜೂರು

ಚಿಕ್ಕಬಾಳ್ಳಾಪುರ: ಪೌರಾಯುಕ್ತೆಗೆ ಧಮ್ಕಿ ಹಾಕಿ, ಬೆದರಿಕೆಯೊಡ್ಡಿದ ಪ್ರಕರಣದಲ್ಲಿ ಬಂಧನಕ್ಕೀಡಾಗಿದ್ದ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ಅವರಿಗೆ ಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.

ಶಿಢಘಟ್ಟ ನಗರಸಭೆ ಪೌರಾಯುಕ್ತೆ ಅಮೃತಾ ಗೌಡ ಅವರಿಗೆ ಜೀವ ಬೆದರಿಕೆ ಹಾಕಿ ಧಮ್ಕಿ ಹಾಕಿದ್ದ ಕೇಸ್ ನಲ್ಲಿ ಬಂಧನಕ್ಕೀಡಾಗಿದ್ದ ರಾಜೀವ್ ಗೌಡ ಅವರನ್ನು ಶಿಡ್ಲಘಟ್ಟ ಕೋರ್ಟ್ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿತ್ತು. ರ್ಬಳಿಕ ರಾಜೀವ್ ಗೌಡ ಅವರನ್ನು ಪೊಲೀಸರು ಎರಡು ದಿನ ಕಸ್ಟಡಿಗೆ ಪಡೆದಿದ್ದರು. ಇಂದು ಪೊಲೀಸ್ ಕಸ್ಟಡಿ ಅವಧಿ ಮುಗಿದ ಹಿನ್ನೆಲೆಯಲ್ಲಿ ರಾಜೀವ್ ಗೌಡ ಅವರನ್ನು ಶಿಡ್ಲಘಟ್ಟ ಜೆ ಎಂ ಎಫ್ ಸಿ ಕೋರ್ಟ್ ಗೆ ಹಾಜರುಪಡಿಸಲಾಗಿತ್ತು. ಈ ವೇಳೆ ನ್ಯಾಯಾಲಯ ರಾಜೀವ್ ಗೌಡ ಅವರಿಗೆ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ.

ಅಕ್ರಮವಾಗಿ ಅಳವಡಿಸಿದ್ದ ಬ್ಯಾನರ್ ತೆರವು ಮಾಡಿದ್ದಕ್ಕೆ ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಾ ಗೌಡಗೆ ಕರೆ ಮಾಡಿ ನಿಂದಿಸಿದ್ದ ರಾಜೀವ್ ಗೌಡ ಧಮ್ಕಿ ಹಾಕಿ ಜೀವಬೆದರಿಕೆಯೊಡ್ಡಿದ್ದರು. ಈ ಕುರಿತ ಆಡಿಯೋ ವೈರಲ್ ಆಗಿತ್ತು. ಅಮೃತಾ ಗೌಡ ರಾಜೀವ್ ಗೌಡ ವಿರುದ್ಧ ದೂರು ದಾಖಲಿಸಿದ್ದರು. ಈ ಹಿನ್ನೆಲೆಯಲ್ಲಿ ರಾಜೀವ್ ಗೌಡ ವಿರುದ್ಧ ಎಫ್ಐಆರ್ ದಾಖಲಾಗಿತ್ತು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

13 ದಿನಗಳಿಂದ ತಲೆಮರೆಸಿಕೊಂಡಿದ್ದ ರಾಜೀವ್ ಗೌಡ ಅವರನ್ನು ಕೇರಳದ ಗಡಿಭಾಗದಲ್ಲಿ ಬಂಧಿಸಲಾಗಿತ್ತು. ಬಂಧಿತರನ್ನು ಕೋರ್ಟ್ ಗೆ ಹಾಜರುಪಡಿಸಿದಾಗ ಶಿಡ್ಲಘಟ್ಟ ಕೋರ್ಟ್ ರಾಜೀವ್ ಗೌಡರನ್ನು ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶ ಹೊರಡಿಸಿತ್ತು. ಬಳಿಕ ಶಿಡ್ಲಘಟ್ಟ ಪೊಲೀಸರು ರಾಜೀವ್ ಗೌಡ ಅವರನ್ನು ಕಸ್ಟಡಿಗೆ ಕೇಳಿದ್ದರು. ಇಂದು ಕಷ್ಟಡಿ ಅವಧಿ ಮುಕ್ತಾಯವಾಗಿದ್ದ ಕಾರಣಕ್ಕೆ ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿತ್ತು. ಈ ವೇಳೆ ಜೆ ಎಂ ಎಫ್ ಸಿ ಕೋರ್ಟ್ ರಾಜೀವ್ ಗೌಡಗೆ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದೆ.

For Latest News Updates, Join Our Whatsapp Community🚩
RELATED ARTICLES

Most Popular