HomeLive NewsBREAKING: ಪೌರಾಯುಕ್ತೆಗೆ ಬೆದರಿಕೆ ಪ್ರಕರಣ: ರಾಜೀವ್ ಗೌಡ ನಿರೀಕ್ಷಣಾ ಜಾಮೀನು ಅರ್ಜಿ ವಜಾ

BREAKING: ಪೌರಾಯುಕ್ತೆಗೆ ಬೆದರಿಕೆ ಪ್ರಕರಣ: ರಾಜೀವ್ ಗೌಡ ನಿರೀಕ್ಷಣಾ ಜಾಮೀನು ಅರ್ಜಿ ವಜಾ

ಚಿಕ್ಕಬಳ್ಳಾಪುರ: ನಗರಸಭೆ ಪೌರಾಯುಕ್ತಗೆ ನಿಂದನೆ, ಜೀವ ಬೆದರಿಕೆ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ರಾಜೀವ್ ಗೌಡಗೆ ಮತ್ತೆ ಶಾಕ್ ಎದುರಾಗಿದೆ. ಚಿಂತಾಮಣಿ ಕೋರ್ಟ್ ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಳಿಸಿದೆ.

ಚಿಕ್ಕಬಳ್ಳಾಪುರದ ಶಿಡ್ಲಘಟ್ಟದಲ್ಲಿ ಅಕ್ರಮವಾಗಿ ಅಳವಡಿಸಿದ್ದ ಬ್ಯಾನರ್ ತೆರವು ಮಾಡಿದ್ದಕ್ಕೆ ನಗರಸಭೆ ಪೌರಾಯುಕ್ತೆ ಅಮೃತಾ ಗೌಡಗೆ ಕರೆ ಮಾಡಿ ನಿಂದಿಸಿದ್ದ ರಾಜೀವ್ ಗೌಡ ಜೀವ ಬೆದರಿಕೆ ಹಾಕಿದ್ದರು. ಈ ಕುರಿತ ಆಡಿಯೋ ಕೂಡ ವೈರಲ್ ಆಗಿತ್ತು. ನಿಂದನೆ ಹಾಗೂ ಬೆದರಿಕೆ ಹಿನ್ನೆಲೆಯಲ್ಲಿ ರಾಜೀವ್ ಗೌಡ ವಿರುದ್ಧ ಪೌರಾಯುಕ್ತೆ ಸ್ದೂರು ದಾಖಲಿಸಿದ್ದರು. ಈ ಹಿನ್ನೆಲೆಯಲ್ಲಿ ರಾಜೀವ್ ಗೌಡ ವಿರುದ್ಧ ಎಫ್ ಐಆರ್ ದಾಖಲಾಗಿದೆ. ಪ್ರಕರಣ ದಾಖಲಾಗುತ್ತಿದ್ದಂತೆ ಬಂಧನ ಭೀತಿಯಲ್ಲಿರುವ ರಾಜೀವ್ ಗೌಡ ನಿರೀಕ್ಷಣಾ ಜಾಮೀನಿಗಾಗಿ ಚಿಂತಾಮಣಿ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು.

ಅರ್ಜಿ ವಿಚಾರಣೆ ನಡೆಸಿದ ಚಿಂತಾಮಣಿಯ 2ನೇ ಹೆಚ್ಚುವ ಸೆಷನ್ಸ್ ನ್ಯಾಯಾಲಯ, ರಾಜೀವ್ ಗೌಡಗೆ ನಿರೀಕ್ಷಣಾ ಜಾಮೀನು ನೀಡಲು ನಿರಾಕರಿಸಿ, ಅರ್ಜಿ ವಜಾಗೊಳಿಸಿದೆ. ಪೊಲೀಸರ ಮುಂದೆ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದೆ. ಈ ಹಿನ್ನೆಲೆಯಲ್ಲಿ ರಾಜೀವ್ ಗೌಡಗೆ ಬಂಧನ ಭೀತಿ ಮತ್ತಷ್ಟು ಹೆಚ್ಚಾಗಿದೆ. ನಿನ್ನೆ ಹೈಕೋರ್ಟ್ ಕೂಡ ಎಫ್ ಐ ಆರ್ ರದ್ದು ಕೋರಿ ರಾಜೀವ್ ಗೌಡ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿತ್ತು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಚಿಂತಾಮಣಿ ಕೋರ್ಟ್ ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಳಿಸುತ್ತಿದ್ದಂತೆ ರಾಜೀವ್ ಗೌಡಗೆ ಶಿಡ್ಲಘಟ್ಟ ಠಾಣೆಗೆ ವಿಚಾರಣೆಗೆ ಹಾಜರಾಗುವಂತೆ ನಾಲ್ಕನೇ ನೋಟಿಸ್ ಜಾರಿಯಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular