HomeLatest NewsBREAKING: ಕಾಂಗ್ರೆಸ್ ಮುಖಂಡ ರಾಜೀವ್ ಗೌಡಗೆ ಬಿಗ್ ಶಾಕ್: ಮಧ್ಯಂತರ ನಿರೀಕ್ಷಣಾ ಜಾಮೀನು ನೀಡಲು ಕೋರ್ಟ್...

BREAKING: ಕಾಂಗ್ರೆಸ್ ಮುಖಂಡ ರಾಜೀವ್ ಗೌಡಗೆ ಬಿಗ್ ಶಾಕ್: ಮಧ್ಯಂತರ ನಿರೀಕ್ಷಣಾ ಜಾಮೀನು ನೀಡಲು ಕೋರ್ಟ್ ನಕಾರ

ಚಿಕ್ಕಬಳ್ಳಾಪುರ: ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆಗೆ ನಿಂದನೆ, ಜೀವಬೆದರಿಕೆ ಹಾಕಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ರಾಜೀವ್ ಗೌಡಗೆ ಬಂಧನ ಭೀತಿ ಮತ್ತಷ್ಟು ಹೆಚ್ಚಾಗಿದೆ. ನಿರೀಕ್ಷಣಾ ಜಾಮೀನು ನೀಡಲು ಕೋರ್ಟ್ ನಿರಾಕರಿಸಿದೆ.

ಅಕ್ರಮವಾಗಿ ಅಳವಡಿಸಿದ್ದ ಬ್ಯಾನರ್ ತೆರವು ಮಾಡಿಸಿದ್ದಕ್ಕೆ ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಾ ಗೌಡ, ಅವರಿಗೆ ಕರೆ ಮಾಡಿ ನಿಂದಿಸಿದ್ದ, ಜೀವಬೆದರಿಕೆ ಹಾಕಿದ್ದ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ವಿರುದ್ಧ ಎರಡು ಎಫ್ಐಆರ್ ದಾಖಲಾಗಿದೆ. ಪ್ರಕರಣ ದಾಖಲಾಗುತ್ತಿದ್ದಂತೆ ತಲೆ ಮರೆಸಿಕೊಂಡಿರುವ ರಾಜೀವ್ ಗೌಡ, ಬಂಧನ ಭೀತಿಯಲ್ಲಿದ್ದು, ಈ ನಡುವೆ ನಿರೀಕ್ಷಣಾ ಜಾಮೀನಿಗಾಗಿ ಕೋರ‍್ತ್ ಗೆ ಅರ್ಜಿ ಸಲ್ಲಿಸಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ರಾಜೀವ್ ಗೌಡ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಚಿಕ್ಕಬಳ್ಳಾಪುರ ಜಿಲ್ಲಾ 2ನೇ ಅಪರ, ಸತ್ರ ನ್ಯಾಯಾಲಯ, ರಾಜೀವ್ ಗೌಡಗೆ ಮಧ್ಯಂತರ ನಿರೀಕ್ಷಣಾ ಜಾಮೀನು ನೀಡಲು ನಿರಾಕರಿಸಿದೆ. ವಿಚಾರಣೆ ಎದುರಿಸುವಂತೆ ಆದೇಶ ನೀಡಿದೆ. ಮುಂದಿನ ವಿಚಾರಣೆಯನ್ನು ಜನವರಿ 22ಕ್ಕೆ ಮುಂದೂಡಿ ಆದೇಶ ಹೊರಡಿಸಿದೆ. ಈ ಹಿನ್ನೆಲೆಯಲ್ಲಿ ರಾಜೀವ್ ಗೌಡಗೆ ಬಂಧನ ಭೀತಿ ಮತ್ತಷ್ಟು ಹೆಚ್ಚಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular