HomeLatest NewsBREAKING: ಪೌರಾಯುಕ್ತೆಗೆ ಬೆದರಿಕೆ ಪ್ರಕರಣ: ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ಅರ್ಜಿ ವಜಾಗೊಳಿಸಿದ ಹೈಕೋರ್ಟ್

BREAKING: ಪೌರಾಯುಕ್ತೆಗೆ ಬೆದರಿಕೆ ಪ್ರಕರಣ: ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ಅರ್ಜಿ ವಜಾಗೊಳಿಸಿದ ಹೈಕೋರ್ಟ್

ಬೆಂಗಳೂರು: ನಗರಸಭೆ ಪೌರಾಯುಕ್ತೆಗೆ ನಿಂದನೆ ಹಾಗೂ ಜೀವಬೆದರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ಎಫ್ಐಆರ್ ರದ್ದು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.

ಅಕ್ರಮವಾಗಿ ಅಳವಡಿಸಿದ್ದ ಬ್ಯಾನರ್ ತೆರವು ಮಾಡಿದ್ದಕ್ಕೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಾ ಗೌಡ ಅವರಿಗೆ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ಕರೆ ಮಾಡಿ ನಿಂದಿಸಿದ್ದಲ್ಲದೇ ಜೀವ ಬೆದರಿಕೆ ಹಾಕಿದ್ದರು. ಈ ಕುರಿತ ಆಡಿಯೋ ವೈರಲ್ ಆಗಿತ್ತು. ಕಾಂಗ್ರೆಸ್ ಮುಖಂಡನ ವಿರುದ್ಧ ಅಮೃತಾ ಗೌಡ ದೂರು ದಾಖಲಿಸಿದ್ದರು. ಜೆಡಿಎಸ್ ನಾಯಕರು ಕೂದ ಕಾಂಗ್ರೆಸ್ ನಾಯಕನ ವಿರುದ್ಧ ಪ್ರಕರಣ ದಾಖಲಿಸಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪೌರಾಯುಕ್ತಗೆ ಬೆದರಿಕೆ ಹಾಕಿದ ಪ್ರಕರಣದಲ್ಲಿ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ವಿರುದ್ಧ ಎಫ್ಐಆರ್ ದಾಖಲಾಗಿತ್ತು. ಬಂಧನ ಭೀತಿಯಲ್ಲಿರುವ ರಾಜೀವ್ ಗೌಡ ತಲೆಮರೆಸಿಕೊಂಡಿದ್ದಾರೆ. ಈನಡುವೆ ರಾಜೀವ್ ಗೌಡ ತನ್ನ ವಿರುದ್ಧದ ಎಫ್ಐಆರ್ ರದ್ದು ಕೋರಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿರುವ ನ್ಯಾ.ನಾಗಪ್ರಸನ್ನ ಅವರಿದ್ದ ಹೈಕೋರ್ಟ್ ಪೀಠ, ರಾಜೀವ್ ಗೌಡ ಅರ್ಜಿ ವಜಾಗೊಳಿಸಿದೆ.

For Latest News Updates, Join Our Whatsapp Community🚩
RELATED ARTICLES

Most Popular