HomeLatest NewsBREAKING: ಪೌರಾಯುಕ್ತೆಗೆ ಧಮ್ಕಿ ಪ್ರಕರಣ: ಕಾಂಗ್ರೆಸ್ ಮುಖಂಡ ರಾಜೀವ್ ಗೌಡಗೆ ನ್ಯಾಯಾಂಗ ಬಂಧನ: ಜೈಲೇ ಗತಿ

BREAKING: ಪೌರಾಯುಕ್ತೆಗೆ ಧಮ್ಕಿ ಪ್ರಕರಣ: ಕಾಂಗ್ರೆಸ್ ಮುಖಂಡ ರಾಜೀವ್ ಗೌಡಗೆ ನ್ಯಾಯಾಂಗ ಬಂಧನ: ಜೈಲೇ ಗತಿ

ಚಿಕ್ಕಬಳ್ಳಾಪುರ: ನಗರಸಭೆ ಪೌರಾಯುಕ್ತೆಗೆ ನಿಂದಿಸಿ, ಜೀವಬೆದರಿಕೆ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ರಾಜೀವ್ ಗೌಡಗೆ ನ್ಯಾಯಾಂಗ ಬಂಧನ ವಿಧಿಸಿ ಶಿಡ್ಲಘಟ್ಟ ಕೋರ್ಟ್ ಆದೇಶ ನೀಡಿದೆ.

ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಾ ಗೌಡ ಅವರಿಗೆ ಬೆದರಿಕೆಯೊಡ್ಡಿ ಧಮ್ಕಿ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ 12 ದಿನಗಳಿಂದ ತಲೆ ಮರೆಸಿಕೊಂಡಿದ್ದ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ಅವರನ್ನು ಕೇರಳದಲ್ಲಿ ಪೊಲೀಸರು ಬಂಧಿಸಿದ್ದರು. ಇಂದು ರಾಜೀವ್ ಗೌಡ ಅವರನ್ನು ಶಿಡ್ಲಘಟ್ಟ ಜೆ.ಎಂ.ಎಫ್.ಸಿ ಕೋರ್ಟ್ ಗೆ ಹಾಜರುಪಡಿಸಲಾಗಿತ್ತು. ಈ ವೇಳೆ ಕೋರ್ಟ್ ರಾಜೀವ್ ಗೌಡಗೆ ಮಧ್ಯಂತರ ಜಮೀನು ನೀಡಲು ನಿರಾಕರಿಸಿದ್ದು, ಅರ್ಜಿ ವಜಾಗೊಳಿಸಿ, 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿ ಕೋರ್ಟ್ ಆದೇಶ ಹೊರಡಿಸಿದೆ. ಈ ಹಿನ್ನೆಲಯಲ್ಲಿ ರಾಜೀವ್ ಗೌಡ ಜೈಲು ಪಾಲಾಗಲಿದ್ದಾರೆ.

ಇದೇ ಪ್ರಕರಣದಲ್ಲಿ ರಾಜೀವ್ ಗೌಡ ತಲೆಮರೆಸಿಕೊಳ್ಳಲು ಸಹಾಯ ಮಾಡಿದ್ದ ಮಂಗಳೂರು ಮೂಲದ ಉದ್ಯಮಿ ಮೈಕೆಲ್ ಅವರಿಗೆ ಕೋರ್ಟ್ ಜಾಮೀನು ಮಂಜೂರು ಮಾಡಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಅಕ್ರಮವಾಗಿ ಅಳವಡಿಸಿದ್ದ ಬ್ಯಾನರ್ ತೆರವುಗೊಳಿಸಿದ್ದಕ್ಕೆ ಚಿಕ್ಕಬಳ್ಳಾಪುರದ ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಾಗೌಡ ಅವರಿಗೆ ಕರೆ ಮಾಡಿದ್ದ ರಾಜೀವ್ ಗೌಡ, ನಿಂದಿಸಿದ್ದಲ್ಲದೇ, ಧಮ್ಕಿ ಹಾಕಿ ಜೀವಬೆದರಿಕೆಯೊಡ್ಡಿದ್ದರು. ಈ ಕುರಿತ ಆಡಿಯೋ ಕೂಡ ವೈರಲ್ ಆಗಿತ್ತು. ಪೌರಾಯುಕ್ತೆ ಅಮೃತಾಗೌಡ, ರಾಜೀವ್ ಗೌಡ ವಿರುದ್ಧ ಶಿಡ್ಲಘಟ್ಟ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಈ ಹಿನ್ನೆಲೆಯಲ್ಲಿ ರಾಜೀವ್ ಗೌಡ ವಿರುದ್ಧ ಎಫ್ ಐಆರ್ ದಾಖಲಾಗಿತ್ತು.

ಬಂಧನ ಭೀತಿಯಲ್ಲಿದ್ದ ರಾಜೀವ್ ಗೌಡ, ನಿರೀಕ್ಷಣಾ ಜಾಮೀನಿಗಾಗಿ ಸಲ್ಲಿಸಿದ್ದ ಅರ್ಜಿಯನ್ನು ಕೋರ್ಟ್ ವಜಾಗೊಳಿಸಿತ್ತು. ಅಲ್ಲದೇ ಹೈಕೋರ್ಟ್ ಕೂಡ ರಾಜೀವ್ ಗೌಡ ಸಲ್ಲಿಸಿದ್ದ ಎಫ್ಐಆರ್ ರದ್ದು ಕೋರಿದ್ದ ಅರ್ಜಿಯನ್ನು ವಜಾಗೊಳಿಸಿತ್ತು. ವಿಚಾರಣೆಗೆ ಹಾಜರಾಗುವಂತೆ ಸೂಚಿಸಿತ್ತು. ಈ ಹಿನ್ನೆಲೆಯಲ್ಲಿ ಪೊಲೀಸರು ರಾಜೀವ್ ಗೌಡ ವಿರುದ್ಧ ಲುಕ್ ಔಟ್ ನೋಟಿಸ್ ಜರಿ ಮಾಡಿದ್ದರು.

ಅಲ್ಲದೇ ರಾಜೀವ್ ಗೌಡ ಬಂಧನಕ್ಕಾಗಿ ಪೊಲೀಸರು ನಾಲ್ಕು ವಿಶೇಷ ತಂಡ ರಚನೆ ಮಾಡಿದ್ದರು. ಪೊಲೀಸರ ಕಣ್ತಪ್ಪಿಸಿ ರಾಜೀವ್ ಗೌಡ ಬೆಂಗಳೂರಿನಿಂದ ಮಂಗಳೂರಿಗೆ ಸಾಗಿ, ಅಲ್ಲಿಂದ ಕೇರಳದತ್ತ ತೆರಳಿರುವ ಬಗ್ಗೆ ಪೊಲೀಸರುಗೆ ಖಚಿತ ಮಾಹಿತಿ ಲಭ್ಯವಾಗಿತ್ತು. ಮಂಗಳೂರು ಮೂಲದ ಉದ್ಯಮಿ ಮೈಕೆಲ್ ಅವರ ಸಹಾಯದಿಂದ ತಲೆಮರೆಸಿಕೊಂಡಿದ್ದ ರಾಜೀವ್ ಗೌಡ ಅವರೇ ಕಾರಿನಲ್ಲಿ ಕೇರದತ್ತ ತೆರಳಿದ್ದರು. ಕೇರಳದ ಗಡಿಭಾಗದಲ್ಲಿ ರಾಜೀವ್ ಗೌಡರನ್ನು ಪೊಲೀಸರು ಬಂಧಿಸಿದ್ದರು. ಇದೇ ವೇಳೆ ರಾಜೀವ್ ಗೌಡಗೆ ತಲೆಮರೆಸಿಕೊಳ್ಳಲು ಸಹಾಯ ಮಾಡಿದ್ದ ಉದ್ಯಮಿ ಮೈಕೆಲ್ ಅವರನ್ನೂ ಬಂಧಿಸಲಾಗಿತ್ತು.

ಇಂದು ಇಬ್ಬರನ್ನೂ ಪೊಲೀಸರು ಶಿಡ್ಲಘಟ್ಟ ಕೋರ್ಟ್ ಗೆ ಹಾಜರುಪಡಿಸಿದ್ದರು. ಈ ವೇಳೆ ನ್ಯಾಯಾಲಯ ರಾಜೀವ್ ಗೌಡಗೆ ನ್ಯಾಯಾಂಗ ಬಂಧನ ವಿಧಿಸಿದೆ. ಬಂಧಿತ ಉದ್ಯಮಿ ಮೈಕೆಲ್ ಗೆ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದೆ.

For Latest News Updates, Join Our Whatsapp Community🚩
RELATED ARTICLES

Most Popular