HomeKarnatakaರಾಜೇಗೌಡ ಮತ್ತೆ ಶಾಸಕರಾದ ಹಿನ್ನೆಲೆ ಬೆಂಬಲಿಗರಿಂದ ಸಂಭ್ರಮಾಚರಣೆ

ರಾಜೇಗೌಡ ಮತ್ತೆ ಶಾಸಕರಾದ ಹಿನ್ನೆಲೆ ಬೆಂಬಲಿಗರಿಂದ ಸಂಭ್ರಮಾಚರಣೆ

ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ ವಿವಾದಕ್ಕೆ ಸಂಬಂಧಿಸಿದಂತೆ ಯಥಾಸ್ಥಿತಿ ಕಾಯ್ದುಕೊಳ್ಳಲು ಸುಪ್ರೀಂಕೋರ್ಟ್ ಆದೇಶಿಸಿದೆ.

ಈ ಆದೇಶದಿಂದಾಗಿ ಟಿ.ಡಿ. ರಾಜೇಗೌಡ ಮತ್ತೆ ಶಾಸಕರಾಗಿ ಮುಂದುವರೆಯಲಿದ್ದಾರೆ/ ಇತ್ತೀಚೆಗೆ ಅಂಚೆ ಮತಗಳ ಮರು ಎಣಿಕೆ ವೇಳೆ ಜಯಗಳಿಸಿದ ಡಿ.ಎನ್. ಜೀವರಾಜ್ ಶಾಸಕ ಸ್ಥಾನಕ್ಕೆ ಹಿನ್ನಡೆ ಆದಂತಾಗಿದೆ. ಅಂಚೆ ಮತ ಮರು ಎಣಿಕೆ ಆದೇಶಕ್ಕೆ ಸುಪ್ರೀಂಕೋರ್ಟ್ ತಡೆ ನೀಡಿದ್ದರಿಂದ ರಾಜೇಗೌಡ ಸಂತಸ ವ್ಯಕ್ತಪಡಿಸಿದ್ದಾರೆ.

ದೆಹಲಿಯಲ್ಲಿ ಮಾತನಾಡಿದ ಅವರು, ಹೈಕೋರ್ಟ್ ಆದೇಶ ಮತ್ತು ನಂತರದ ಪ್ರಕ್ರಿಯೆಗೆ ಸುಪ್ರೀಂಕೋರ್ಟ್ ತಡೆ ನೀಡಿದ್ದು, ನನಗೆ ನ್ಯಾಯ ದೊರೆತಿದೆ. ಅಂಚೆ ಮತ ಎಣಿಕೆಯಲ್ಲಿ ಎರಡು ಮತಗಳು ನನ್ನ ಪರವಾಗಿ ಬಂದಿದ್ದವು. ನನ್ನ ಮತಗಳು ಹೆಚ್ಚಾಗುವ ಬದಲು ಕಡಿಮೆ ಎಂದು ತೋರಿಸಲಾಗಿತ್ತು. ಈ ಹಂತದಲ್ಲಿ ಅಕ್ರಮವಾಗಿದೆ ಎನ್ನುವ ಅನುಮಾನವಿದ್ದು, ಸುಪ್ರೀಂ ಕೋರ್ಟ್ ನಲ್ಲಿ ಮೇಲ್ಮನವಿ ಸಲ್ಲಿಸಿದ್ದೆ. ಹೈಕೋರ್ಟ್ ಆದೇಶಕ್ಕೆ ಸುಪ್ರೀಂಕೋರ್ಟ್ ತಡೆಯನ್ನು ನೀಡಿದೆ. ಇದರಿಂದ ನನಗೆ ನ್ಯಾಯ ಸಿಕ್ಕಿದೆ ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸಂಭ್ರಮಾಚರಣೆ

ಶೃಂಗೇರಿಯಲ್ಲಿ ರಾಜೇಗೌಡ ಬೆಂಬಲಿಗರು ಮತ್ತು ಕಾಂಗ್ರೆಸ್ ಕಾರ್ಯಕರ್ತರು ಸಂಭ್ರಮಾಚರಣೆ ನಡೆಸಿದ್ದಾರೆ. ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ ಕುರಿತಂತೆ ಸುಪ್ರೀಂ ಕೋರ್ಟ್ ಯಥಾಸ್ಥಿತಿ ಕಾಯ್ದುಕೊಳ್ಳಲು ಆದೇಶಿಸಿದ ಹಿನ್ನೆಲೆಯಲ್ಲಿ ರಾಜೇಗೌಡರು ಮತ್ತೆ ಶಾಸಕರಾಗಿ ಮುಂದುವರೆಯಲಿದ್ದಾರೆ.

ಶೃಂಗೇರಿ ಸೇರಿದಂತೆ ವಿವಿಧೆಡೆ ಕಾಂಗ್ರೆಸ್ ಕಾರ್ಯಕರ್ತರು, ಬೆಂಬಲಿಗರು ಪಟಾಕಿ ಸಿಡಿಸಿ ಸಂಭ್ರಮದಿಂದ ಮೆರವಣಿಗೆ ನಡೆಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular