ಸೂಪರ್ ಸ್ಟಾರ್ ರಜನಿಕಾಂತ್ ಮತ್ತು ಉಳಗನಾಯಗನ್ ಕಮಲ್ ಹಾಸನ್ ಅವರು ಸಿನಿ ಪ್ರೇಮಿಗಳಿಗೆ ಸಿಹಿ ಸುದ್ದಿ ನೀಡಿದ್ದಾರೆ.
ತಲೈವಾ 173 ಸಿನಿಮಾಗೆ ರಜನಿಕಾಂತ್ ಮತ್ತು ಕಮಲಹಾಸನ್ ಒಂದಾಗುತ್ತಿದ್ದಾರೆ. ರಜನಿಕಾಂತ್ 173 ನೇ ಸಿನಿಮಾ ಘೋಷಣೆಯಾಗಿದ್ದು, ಈ ಚಿತ್ರವನ್ನು ಕಮಲ್ ಹಾಸನ್ ನಿರ್ಮಾಣ ಮಾಡುತ್ತಿದ್ದಾರೆ. ತಮ್ಮದೇ ನಿರ್ಮಾಣ ಸಂಸ್ಥೆಯಾಗಿರುವ ರಾಜ್ ಕಮಲ್ ಫಿಲಂ ಇಂಟರ್ನ್ಯಾಷನಲ್ ಕಂಪನಿ ಮೂಲಕ ಕಮಲ್ ಹಾಸನ್ ಅವರು ರಜನಿಕಾಂತ್ ಚಿತ್ರವನ್ನು ನಿರ್ಮಾಣ ಮಾಡಲಿದ್ದಾರೆ.
ರಜನಿಕಾಂತ್ ಅವರ ‘ಅರುಣಾಚಲಂ’ ನಿರ್ದೇಶನ ಮಾಡಿದ್ದ ಖ್ಯಾತ ನಿರ್ದೇಶಕ ಸುಂದರ್ ಈ ಚಿತ್ರ ನಿರ್ದೇಶನ ಮಾಡಲಿದ್ದಾರೆ. 2027ರ ಪೊಂಗಲ್ ಹಬ್ಬಕ್ಕೆ ಸಿನಿಮಾ ಬಿಡುಗಡೆ ಮಾಡಲು ಪ್ಲಾನ್ ಮಾಡಿಕೊಳ್ಳಲಾಗಿದೆ.
