HomeLatest Newsಅಭಿಮಾನಿಗಳಿಗೆ ಸಿಹಿ ಸುದ್ದಿ ನೀಡಿದ ರಜನಿಕಾಂತ್, ಕಮಲ್ ಹಾಸನ್: ಒಂದೇ ಚಿತ್ರದಲ್ಲಿ ಸೂಪರ್ ಸ್ಟಾರ್ಸ್

ಅಭಿಮಾನಿಗಳಿಗೆ ಸಿಹಿ ಸುದ್ದಿ ನೀಡಿದ ರಜನಿಕಾಂತ್, ಕಮಲ್ ಹಾಸನ್: ಒಂದೇ ಚಿತ್ರದಲ್ಲಿ ಸೂಪರ್ ಸ್ಟಾರ್ಸ್

ಸೂಪರ್ ಸ್ಟಾರ್ ರಜನಿಕಾಂತ್ ಮತ್ತು ಉಳಗನಾಯಗನ್ ಕಮಲ್ ಹಾಸನ್ ಅವರು ಸಿನಿ ಪ್ರೇಮಿಗಳಿಗೆ ಸಿಹಿ ಸುದ್ದಿ ನೀಡಿದ್ದಾರೆ.

ತಲೈವಾ 173 ಸಿನಿಮಾಗೆ ರಜನಿಕಾಂತ್ ಮತ್ತು ಕಮಲಹಾಸನ್ ಒಂದಾಗುತ್ತಿದ್ದಾರೆ. ರಜನಿಕಾಂತ್ 173 ನೇ ಸಿನಿಮಾ ಘೋಷಣೆಯಾಗಿದ್ದು, ಈ ಚಿತ್ರವನ್ನು ಕಮಲ್ ಹಾಸನ್ ನಿರ್ಮಾಣ ಮಾಡುತ್ತಿದ್ದಾರೆ. ತಮ್ಮದೇ ನಿರ್ಮಾಣ ಸಂಸ್ಥೆಯಾಗಿರುವ ರಾಜ್ ಕಮಲ್ ಫಿಲಂ ಇಂಟರ್ನ್ಯಾಷನಲ್ ಕಂಪನಿ ಮೂಲಕ ಕಮಲ್ ಹಾಸನ್ ಅವರು ರಜನಿಕಾಂತ್ ಚಿತ್ರವನ್ನು ನಿರ್ಮಾಣ ಮಾಡಲಿದ್ದಾರೆ.

ರಜನಿಕಾಂತ್ ಅವರ ‘ಅರುಣಾಚಲಂ’ ನಿರ್ದೇಶನ ಮಾಡಿದ್ದ ಖ್ಯಾತ ನಿರ್ದೇಶಕ ಸುಂದರ್ ಈ ಚಿತ್ರ ನಿರ್ದೇಶನ ಮಾಡಲಿದ್ದಾರೆ. 2027ರ ಪೊಂಗಲ್ ಹಬ್ಬಕ್ಕೆ ಸಿನಿಮಾ ಬಿಡುಗಡೆ ಮಾಡಲು ಪ್ಲಾನ್ ಮಾಡಿಕೊಳ್ಳಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular