ಯುಪಿ ಸಿಎಂ ಯೋಗಿ ಜೊತೆ ನಟ ರಜನಿಕಾಂತ್ ‘ಜೈಲರ್’ ವೀಕ್ಷಣೆ

Rajinikanth arrives in Lucknow, will meet UP CM Yogi Adityanath, will show ' Jailor' film

ವಿಶ್ವದಾದ್ಯಂತ ಬಿಡುಗಡೆಯಾಗಿರುವ ತಮಿಳು ಚಿತ್ರರಂಗದ ಸೂಪರ್ ಸ್ಟಾರ್ ರಜನಿಕಾಂತ್ ಅವರ ಅಭಿನಯದ ‘ಜೈಲರ್’ ಸಿನಿಮಾ ಭರ್ಜರಿ ಪ್ರದರ್ಶನ ಕಾಣುತ್ತಿದೆ. ಈ ಚಿತ್ರ ಈಗಾಗಲೇ ನೂರಾರು ಕೋಟಿ ರೂಪಾಯಿಗಳ ಗಳಿಕೆ ಮಾಡಿದ್ದು, ಬಾಕ್ಸ್ ಆಫೀಸ್ ಕಲೆಕ್ಷನ್ ನಲ್ಲಿ ಹೊಸ ದಾಖಲೆ ಬರೆಯಲು ಸಜ್ಜಾಗಿದೆ.

ಇದರ ಮಧ್ಯೆ ಜೈಲರ್ ಸಿನಿಮಾದ ಪ್ರಚಾರ ಕಾರ್ಯಕ್ಕಾಗಿ ನಟ ರಜನಿಕಾಂತ್ ಅವರು ಉತ್ತರ ಪ್ರದೇಶದ ಲಖನೌಗೆ ಭೇಟಿ ನೀಡಿದ್ದು ಇಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಭೇಟಿಯಾಗಿ ಅವರ ಜೊತೆಗೆ ತಮ್ಮ ಅಭಿನಯದ ‘ಜೈಲರ್’ ಚಿತ್ರವನ್ನು ವೀಕ್ಷಿಸಲಿದ್ದಾರೆ.

ಲಖನೌ ವಿಮಾನ ನಿಲ್ದಾಣದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ರಜನಿಕಾಂತ್ ಈ ವಿಷಯ ತಿಳಿಸಿದ್ದು, ದೇವರ ದಯೆಯಿಂದ ‘ಜೈಲರ್’ ಸಿನೆಮಾ ಉತ್ತಮ ಪ್ರದರ್ಶನ ಕಾಣುತ್ತಿದೆ. ಬಾಕ್ಸ್ ಆಫೀಸ್ ನಲ್ಲಿ ಒಳ್ಳೆಯ ಗಳಿಕೆ ಮಾಡುತ್ತಿದೆ ಎಂದು ತಿಳಿಸಿದ್ದಾರೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read