ಮೋದಿ ಪ್ರಮಾಣ ವಚನ ಸಮಾರಂಭದಲ್ಲಿ ರಜನಿಕಾಂತ್, ಅನಿಲ್ ಕಪೂರ್, ಅನುಪಮ್ ಖೇರ್ ಭಾಗಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಮೂರನೇ ಬಾರಿಗೆ ಪ್ರಮಾಣ ವಚನ ಸ್ವೀಕರಿಸಲಿದ್ದು, ಪ್ರಮಾಣ ವಚನ ಸಮಾರಂಭದಲ್ಲಿ ಭಾಗವಹಿಸಲು ರಜನಿಕಾಂತ್ ಸೇರಿ ಹಲವು ನಟರು ದೆಹಲಿ ತಲುಪಿದ್ದಾರೆ.

ದೆಹಲಿಯಲ್ಲಿ ನಡೆಯಲಿರುವ ಪ್ರಧಾನಿ ನರೇಂದ್ರ ಮೋದಿಯವರ ಪ್ರಮಾಣ ವಚನ ಸಮಾರಂಭದಲ್ಲಿ ಪಾಲ್ಗೊಳ್ಳಲು ನಟ ರಜನಿಕಾಂತ್ ಕೂಡ ದೆಹಲಿಗೆ ಆಗಮಿಸಿದ್ದು, ಮಾಧ್ಯಮಗಳ ಮುಂದೆ ಮಾತನಾಡಿದ ಅವರು, ಇದು ಬಹಳ ದೊಡ್ಡ ಸಾಧನೆಯಾಗಿದೆ. ಮೋದಿಯವರಿಗೆ ಶುಭಾಶಯ ತಿಳಿಸುತ್ತೇನೆ. ಈ ಬಾರಿಯ ಸಂಸತ್ ಚುನಾವಣೆಯಲ್ಲಿ ಜನರು ಪ್ರಬಲ ಪ್ರತಿಪಕ್ಷವನ್ನು ಆಯ್ಕೆ ಮಾಡಿದ್ದಾರೆ. ಇದು ಆರೋಗ್ಯಕರ ಪ್ರಜಾಪ್ರಭುತ್ವಕ್ಕೆ ಕಾರಣವಾಗುತ್ತದೆ. ಆಂಧ್ರಪ್ರದೇಶ ಸಿಎಂ ಆಗಿ ಚಂದ್ರಬಾಬು ನಾಯ್ಡು ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ನನಗೆ ಆಹ್ವಾನ ಬಂದಿದೆಎಂದು ಹೇಳಿದ್ದಾರೆ.

ನಟ ಅನುಪಮ್ ಖೇರ್ ದೆಹಲಿ ತಲುಪಿದ್ದು, ಮೂರನೇ ಬಾರಿಗೆ ಪ್ರಮಾಣ ವಚನ ಸಮಾರಂಭದಲ್ಲಿ ಪಾಲ್ಗೊಳ್ಳುತ್ತಿರುವುದು ನನ್ನ ಅದೃಷ್ಟ ಎಂದು ಹೇಳಿದ್ದಾರೆ. ಈ ಸಂದರ್ಭ ಐತಿಹಾಸಿಕ ಕ್ಷಣ. ಕಳೆದ 10 ವರ್ಷಗಳಲ್ಲಿ ಪ್ರಧಾನ ಮಂತ್ರಿಗಳು ದೇಶವನ್ನು ಉತ್ತಮವಾಗಿ ನಿರ್ವಹಿಸಿದ್ದಾರೆ. ಪ್ರಧಾನಿಯವರ ನಾಯಕತ್ವದ ಹೊಸ ಸರ್ಕಾರವು ದೇಶವನ್ನು ಮುನ್ನಡೆಸುತ್ತದೆ ಎಂದು ನಾನು ಭಾವಿಸುತ್ತೇನೆ. ನಾವು ವಿಶ್ವದ ಐದನೇ ಅತಿದೊಡ್ಡ ಆರ್ಥಿಕತೆ ಮತ್ತು ಮೂರನೇ ಅತಿದೊಡ್ಡ ಆರ್ಥಿಕತೆಯಾಗಬಹುದು. ಈ ಸಮಾರಂಭಕ್ಕೆ ನನ್ನನ್ನು ಆಹ್ವಾನಿಸಿದವರಿಗೆ ನಾನು ಧನ್ಯವಾದ ಹೇಳುತ್ತೇನೆ ಎಂದು ಹೇಳಿದ್ದಾರೆ.

ನರೇಂದ್ರ ಮೋದಿಯವರ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಪಾಲ್ಗೊಳ್ಳಲು ನಟ ಅನಿಲ್ ಕಪೂರ್ ಕೂಡ ದೆಹಲಿ ತಲುಪಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read