HomeIndiaBREAKING: ರಜಪೂತ ಕರ್ಣಿ ಸೇನೆಯ ಅಧ್ಯಕ್ಷನ ಬರ್ಬರ ಹತ್ಯೆ

BREAKING: ರಜಪೂತ ಕರ್ಣಿ ಸೇನೆಯ ಅಧ್ಯಕ್ಷನ ಬರ್ಬರ ಹತ್ಯೆ

ಜೈಪುರ: ರಜಪೂತ ಕರ್ಣಿ ಸೇನೆಯ ರಾಷ್ಟ್ರೀಯ ಅಧ್ಯಕ್ಷ ಸುಖದೇವ್ ಸಿಂಗ್ ಗೋಗಮೇಡಿ ಅವರನ್ನು ಹಾಡಹಗಲೇ ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆಗೈದಿರುವ ಘಟನೆ ನಡೆದಿದೆ.

ರಾಜಸ್ಥಾನದ ಜೈಪುರದಲ್ಲಿ ಸುಖದೇವ್ ಸಿಂಗ್ ಗೋಗಮೇಡಿ ಮೇಲೆ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದಾರೆ. ಸ್ಥಳದಲ್ಲೇ ಸುಖದೇವ್ ಸಿಂಗ್ ಮೃತಪಟ್ಟಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇಬ್ಬರು ದುಷ್ಕರ್ಮಿಗಳು ಸುಖದೇವ್ ಸಿಂಗ್ ಮೇಲೆ ಏಕಾಏಕಿ ಗುಂಡಿನ ದಾಳಿ ನಡೆಸಿದ್ದು, ಗುಂಡೇಟಿಗೆ ರಜಪೂತ ಕರ್ಣಿ ಸೇನೆ ಅಧ್ಯಕ್ಷ ಬಲಿಯಾಗಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದು ಪರಿಶೀಲನೆ ನಡೆಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular