HomeKarnatakaರಾಜ್ಯಸಭೆ ಚುನಾವಣೆಗೆ ನಾಳೆಯಿಂದ ನಾಮಪತ್ರ ಸಲ್ಲಿಕೆ: ಕುತೂಹಲ ಮೂಡಿಸಿದ ರಾಜಕೀಯ ಪಕ್ಷಗಳ ನಡೆ

ರಾಜ್ಯಸಭೆ ಚುನಾವಣೆಗೆ ನಾಳೆಯಿಂದ ನಾಮಪತ್ರ ಸಲ್ಲಿಕೆ: ಕುತೂಹಲ ಮೂಡಿಸಿದ ರಾಜಕೀಯ ಪಕ್ಷಗಳ ನಡೆ

ಬೆಂಗಳೂರು: ರಾಜ್ಯ ವಿಧಾನಸಭೆಯಿಂದ ರಾಜ್ಯಸಭೆಯ 4 ಸ್ಥಾನಗಳಿಗೆ ನಡೆಯುವ ಚುನಾವಣೆಗೆ ಫೆಬ್ರವರಿ 8ರಂದು ಅಧಿಸೂಚನೆ ಹೊರಬೀಳಲಿದೆ.

ಫೆಬ್ರವರಿ 15 ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ. ಫೆಬ್ರವರಿ 16ರಂದು ನಾಮಪತ್ರ ಪರಿಶೀಲನೆ ನಡೆಯಲಿದ್ದು, ಫೆಬ್ರವರಿ 20 ನಾಮಪತ್ರ ವಾಪಸ್ ಪಡೆಯಲು ಕೊನೆಯ ದಿನವಾಗಿದೆ. ಫೆಬ್ರವರಿ 27ರಂದು ಮತದಾನ, ಮತ ಎಣಿಕೆ ನಡೆಯಲಿದೆ.

ವಿಧಾನಸಭೆಯಲ್ಲಿ ಪಕ್ಷಗಳ ಬಲಾಬಲ ಆಧರಿಸಿ ಕಾಂಗ್ರೆಸ್ ಪಕ್ಷಕ್ಕೆ ಮೂರು ಸ್ಥಾನಗಳು ಸಿಗುತ್ತವೆ. ಇಬ್ಬರು ಹಾಲಿ ಸದಸ್ಯರೇ ಮುಂದುವರೆಯುವ ನಿರೀಕ್ಷೆ ಇದೆ. ಮೂರನೇ ಸ್ಥಾನಕ್ಕೆ ಕಾಂಗ್ರೆಸ್ ಹೈಕಮಾಂಡ್ ಸೂಚಿಸುವ ಹೆಸರಿನ ಬಗ್ಗೆ ಕುತೂಹಲ ಮೂಡಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಹಾಲಿ ಬಿಜೆಪಿಯ ರಾಜೀವ್ ಚಂದ್ರಶೇಖರ್, ಕಾಂಗ್ರೆಸ್ ನ ಜಿ.ಸಿ. ಚಂದ್ರಶೇಖರ್, ಡಾ. ಹನುಮಂತಯ್ಯ, ನಾಸಿರ್ ಹುಸೇನ್ ಅವರ ಅವಧಿ ಏಪ್ರಿಲ್ 2ರಂದು ಮುಕ್ತಾಯವಾಗಲಿದೆ. ಬಿಜೆಪಿಯಿಂದ ರಾಜೀವ್ ಚಂದ್ರಶೇಖರ್ ಗೆ ಮತ್ತೊಮ್ಮೆ ಅವಕಾಶ ಕಲ್ಪಿಸುವ ಸಾಧ್ಯತೆ ಇದೆ. ಕಾಂಗ್ರೆಸ್ ಪಕ್ಷದ ಮೂರನೇ ಅಭ್ಯರ್ಥಿಯಾಗಿ ದೆಹಲಿ ಹೈಕಮಾಂಡ್ ಸೂಚಿಸುವ ಹೊಸ ಹೆಸರಿನ ಕುರಿತಾಗಿ ಕುತೂಹಲ ಮೂಡಿದೆ. ಬಿಜೆಪಿ –ಜೆಡಿಎಸ್ ಮೈತ್ರಿಕೂಟದ ತಂತ್ರಗಾರಿಕೆ ಭಾಗವಾಗಿ ಜೆಡಿಎಸ್ ಅಭ್ಯರ್ಥಿಯಾಗಿ ಕುಪೇಂದ್ರ ರೆಡ್ಡಿ ಅವರನ್ನು ಕಣಕ್ಕಿಳಿಸುವ ಸಾಧ್ಯತೆ ಇದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular