ಜೈಪುರ : ಕಾಂಗ್ರೆಸ್ ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರನ್ನು ರಾಜಸ್ಥಾನದಿಂದ ರಾಜ್ಯಸಭಾ ಅಭ್ಯರ್ಥಿಯಾಗಿ ಘೋಷಿಸಲಾಗಿದ್ದು, ಇಂದು ನಾಮಪತ್ರ ಸಲ್ಲಿಸಿದರು.
ಇಂದು ಬೆಳಿಗ್ಗೆ ಜೈಪುರಕ್ಕೆ ಸೋನಿಯಾ ಗಾಂಧಿ ರಾಜ್ಯಸಭಾ ಚುನಾವಣೆಗೆ ನಾಮಪತ್ರ ಸಲ್ಲಿಸಿದರು. ಈ ವೇಳೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪುತ್ರ ರಾಹುಲ್ ಗಾಂಧಿ, ಮಗಳು ಪ್ರಿಯಾಂಕಾ ಗಾಂಧಿ ವಾದ್ರಾ ಸಾಥ್ ನೀಡಿದರು.
ಸೋನಿಯಾ ಗಾಂಧಿ ಅವರನ್ನು ಕಾಂಗ್ರೆಸ್ ಪಕ್ಷದಿಂದ ರಾಜ್ಯಸಭಾ ಅಭ್ಯರ್ಥಿಯಾಗಿ ಘೋಷಿಸಿರುವುದನ್ನು ನಾವು ಹೃತ್ಪೂರ್ವಕವಾಗಿ ಸ್ವಾಗತಿಸುತ್ತೇವೆ ಎಂದು ರಾಜಸ್ಥಾನ ಮಾಜಿ ಸಿಎಂ ಅಶೋಕ್ ಗೆಹ್ಲೋಟ್ ಹೇಳಿದ್ದಾರೆ.
https://twitter.com/ashokgehlot51/status/1757621792611725710?ref_src=twsrc%5Etfw%7Ctwcamp%5Etweetembed%7Ctwterm%5E1757621792611725710%7Ctwgr%5E420f3a618df332b979d9c4d9d36ee0c625bebfcb%7Ctwcon%5Es1_&ref_url=https%3A%2F%2Fwww.hindustantimes.com%2Findia-news%2Fsonia-gandhi-likely-to-file-nomination-for-rajya-sabha-from-rajasthan-today-101707876757862.html