ರಾಜ್ಯಸಭೆ ಚುನಾವಣೆ : ಮೂರು ರಾಜ್ಯಗಳಲ್ಲಿ ಬಿಜೆಪಿ 10, ಕಾಂಗ್ರೆಸ್ 3 ಸ್ಥಾನಗಳಲ್ಲಿ ಗೆಲುವು

ನವದೆಹಲಿ :  ಫೆಬ್ರವರಿ 27: ಮೂರು ರಾಜ್ಯಗಳ 15 ರಾಜ್ಯಸಭಾ ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಬಿಜೆಪಿ 10, ಕಾಂಗ್ರೆಸ್ 3 ಮತ್ತು ಸಮಾಜವಾದಿ ಪಕ್ಷ 2 ಸ್ಥಾನಗಳನ್ನು ಗೆದ್ದಿದೆ.

ಉತ್ತರಪ್ರದೇಶದಲ್ಲಿ ಹೆಚ್ಚುವರಿ ಸ್ಥಾನವನ್ನು ಗೆದ್ದಿರುವ ಬಿಜೆಪಿ, ಹಿಮಾಚಲ ಪ್ರದೇಶದಲ್ಲಿ ಒಂದು ಸ್ಥಾನವನ್ನು ಗೆದ್ದಿದೆ. ಹಿಮಾಚಲ ಪ್ರದೇಶದಲ್ಲಿ ಆಡಳಿತಾರೂಢ ಕಾಂಗ್ರೆಸ್ ನ ಆರು ಶಾಸಕರು ಅಡ್ಡ ಮತದಾನ ಮಾಡಿದ್ದರಿಂದ ಕಾಂಗ್ರೆಸ್ ಅಭ್ಯರ್ಥಿ ಅಭಿಷೇಕ್ ಮನು ಸಿಂಘ್ವಿ ಸೋತಿದ್ದಾರೆ. ಬಿಜೆಪಿಯ ಹರ್ಷವರ್ಧನ್ ಅವರು ವಿಜಯಶಾಲಿಯಾಗಿ ಹೊರಹೊಮ್ಮಿದರು,

ಉತ್ತರಪ್ರದೇಶದಲ್ಲಿ ನಡೆದ ರಾಜ್ಯಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷವು ಎಂಟು ಸ್ಥಾನಗಳನ್ನು ಗೆದ್ದರೆ, ಮೂವರು ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದ ಸಮಾಜವಾದಿ ಪಕ್ಷವು ಕೇವಲ ಎರಡು ಸ್ಥಾನಗಳನ್ನು ಮಾತ್ರ ಗೆಲ್ಲಲು ಸಾಧ್ಯವಾಯಿತು.

ಕರ್ನಾಟಕದಲ್ಲಿ ಅಧಿಕಾರದಲ್ಲಿರುವ ಕಾಂಗ್ರೆಸ್ ಮೂರು ಸ್ಥಾನಗಳನ್ನು ಗೆದ್ದರೆ, ಬಿಜೆಪಿ ಒಂದು ಸ್ಥಾನವನ್ನು ಗೆದ್ದಿದೆ. ಕಾಂಗ್ರೆಸ್ ಅಭ್ಯರ್ಥಿಗಳು ವಿಧಾನಸಭೆಯಲ್ಲಿ ಪಕ್ಷದ ಸಂಖ್ಯೆಗಿಂತ ಹೆಚ್ಚಿನ ಮತಗಳನ್ನು ಪಡೆದರು. ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ ಕುಪೇಂದ್ರ ರೆಡ್ಡಿ ಸೋಲು ಅನುಭವಿಸಿದ್ದಾರೆ. ಬಿಜೆಪಿ ಶಾಸಕ ಎಸ್.ಟಿ.ಸೋಮಶೇಖರ್ ಕಾಂಗ್ರೆಸ್ ಪರವಾಗಿ ಮತ ಚಲಾಯಿಸಿದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read