HomeKarnatakaBIG NEWS: ರಂಗೇರಿದ ರಾಜ್ಯಸಭಾ ಚುನಾವಣಾ ಅಖಾಡ: ಬಿಜೆಪಿ-ಜೆಡಿಎಸ್ ಅಭ್ಯರ್ಥಿಯಾಗಿ ಕುಪೇಂದ್ರ ರೆಡ್ಡಿ ಕಣಕ್ಕೆ

BIG NEWS: ರಂಗೇರಿದ ರಾಜ್ಯಸಭಾ ಚುನಾವಣಾ ಅಖಾಡ: ಬಿಜೆಪಿ-ಜೆಡಿಎಸ್ ಅಭ್ಯರ್ಥಿಯಾಗಿ ಕುಪೇಂದ್ರ ರೆಡ್ಡಿ ಕಣಕ್ಕೆ

ಬೆಂಗಳೂರು: ರಾಜ್ಯಸಭಾ ಚುನಾವಣೆಗೆ ನಾಮ ಪತ್ರ ಸಲ್ಲಿಸಲು ಇಂದು ಕೊನೆ ದಿನವಾಗಿದ್ದು, ಕೊನೇ ಕ್ಷಣದಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ಅಭ್ಯರ್ಥಿಯನ್ನು ಕಣಕ್ಕಿಳಿಸಿದೆ.

ರಾಜ್ಯಸಭಾ ಚುನಾವಣಾ ಅಖಾಡಕ್ಕೆ ಈಗಾಗಲೇ ನಾಲ್ಕು ಅಭ್ಯರ್ಥಿಗಳು ಕಣದಲ್ಲಿದ್ದು, 5ನೇ ಅಭ್ಯರ್ಥಿಯನ್ನಾಗಿ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿಯನ್ನಾಗಿ ಕುಪೇಂದ್ರ ರೆಡ್ಡಿಯನ್ನು ಕಣಕ್ಕಿಳಿಸಿದೆ.

ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ, ಬಿಜೆಪಿಯ ರಾಜ್ಯ ಹಾಗೂ ರಾಷ್ಟ್ರೀಯ ನಾಯಕರ ಸಲಹೆಯಂತೆ ಕುಪೇಂದ್ರ ರೆಡ್ಡಿಯನ್ನು ರಾಜ್ಯಸಭಾ ಅಭ್ಯರ್ಥಿಯನ್ನಾಗಿ ಕಣಕ್ಕಿಳಿಸಿದ್ದೇವೆ. ಹೆಚ್ಚುವರಿ ಮತಗಳು ಕುಪೇಂದ್ರ ರೆಡ್ಡಿಗೆ ವರ್ಗಾವಣೆ ಮಾಡಬೇಕು ಎಂದು ತೀರ್ಮಾನಿಸಿ ಅವರನ್ನು ಕಣಕ್ಕಿಳಿಸಲಾಗಿದೆ ಎಂದು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular