BIG NEWS: ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ ಬಗ್ಗೆ ನಾಳೆ ಸಿಎಂ ಅಧ್ಯಕ್ಷತೆಯಲ್ಲಿ ಮಹತ್ವದ ಸಭೆ

ಬೆಂಗಳೂರು: ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಆಯ್ಕೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಗುರುವಾರ ಉನ್ನತ ಮಟ್ಟದ ಸಭೆ ನಡೆಯಲಿದೆ.

ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ನಡೆಯಲಿರುವ ಸಭೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ಅಧ್ಯಕ್ಷತೆಯ 30 ಸದಸ್ಯರ ಒಳಗೊಂಡ ಸಲಹಾ ಸಮಿತಿ ಪ್ರತಿನಿಧಿಗಳು ಭಾಗವಹಿಸಲಿದ್ದಾರೆ.

ವಿವಿಧ ಕ್ಷೇತ್ರಗಳಲ್ಲಿ ಸಾಧಕರ ಆಯ್ಕೆಗೆ ಸಂಬಂಧಿಸಿದಂತೆ ಸಮಿತಿ ಈಗಾಗಲೇ ಹಲವು ಸುತ್ತಿನ ಸಭೆ ನಡೆಸಿದ್ದು, ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ನಡೆಯುವ ಸಭೆಯಲ್ಲಿ ಪ್ರಶಸ್ತಿಗೆ ಪುರಸ್ಕೃತರನ್ನು ಆಯ್ಕೆ ಮಾಡುವ ಸಾಧ್ಯತೆ ಇದೆ.

ಪ್ರಶಸ್ತಿಗಾಗಿ ಸೇವಾ ಸಿಂಧು ಪೋರ್ಟಲ್ ಮೂಲಕ 25 ಸಾವಿರಕ್ಕೂ ಹೆಚ್ಚು ನಾಮ ನಿರ್ದೇಶನ ಸಲ್ಲಿಕೆಯಾಗಿದೆ. ಕೆಲವರು ಭೌತಿಕವಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಗೆ ಅರ್ಜಿ ಸಲ್ಲಿಸಿದ್ದಾರೆ. ಸಲಹಾ ಸಮಿತಿ ವಿವಿಧ ಕ್ಷೇತ್ರಗಳ ಸಾಧಕರ ಹೆಸರನ್ನು ಸಿದ್ಧಪಡಿಸಿದ್ದು, ಸಿಎಂ ನೇತೃತ್ವದ ಸಭೆಯಲ್ಲಿ ಸಲ್ಲಿಸಲಿದೆ. ಈ ಬಾರಿ 68 ಮಂದಿಯನ್ನು ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ ಮಾಡುವ ಸಾಧ್ಯತೆ ಇದೆ.

ಸಾಹಿತ್ಯ, ಸಮಾಜ ಸೇವೆ, ಸಂಗೀತ ಸೇರಿದಂತೆ ವಿವಿಧ ಕ್ಷೇತ್ರಗಳ ಸಾಧಕರಿಗೆ ರಾಜ್ಯೋತ್ಸವ ಪ್ರಶಸ್ತಿ ನೀಡಲಿದ್ದು, 5 ಲಕ್ಷ ರೂ. ನಗದು, 25 ಗ್ರಾಂ ಚಿನ್ನದ ಪದಕ ಮತ್ತು ಸ್ಮರಣಿಕೆ ಒಳಗೊಂಡಿರುತ್ತದೆ. ತಜ್ಞರ ಸಮಿತಿ ಆಯ್ಕೆ ಮಾಡಿದ ವಿವಿಧ ಕ್ಷೇತ್ರಗಳ ಸಾಧಕರ ಹೆಸರನ್ನು ಸಿಎಂಗೆ ಸಲ್ಲಿಸಲಿದೆ ಎಂದು ಹೇಳಲಾಗಿದೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read