HomeKarnatakaBREAKING: ರಾಜ್ಯೋತ್ಸವ ಮೆರವಣಿಗೆ ವೇಳೆ ಗಲಾಟೆ; ಹೊಡೆದಾಡಿಕೊಂಡ ಎರಡು ಗುಂಪುಗಳು

BREAKING: ರಾಜ್ಯೋತ್ಸವ ಮೆರವಣಿಗೆ ವೇಳೆ ಗಲಾಟೆ; ಹೊಡೆದಾಡಿಕೊಂಡ ಎರಡು ಗುಂಪುಗಳು

ಬೆಳಗಾವಿ: ಕನ್ನಡ ರಾಜ್ಯೋತ್ಸವ ಸಂಭ್ರಮಾಚರಣೆ ವೇಳೆ ಗಲಾಟೆ ನಡೆದು, ಎರಡು ಗುಂಪಿನ ನಡುವೆ ಹೊಡೆದಾಡಿಕೊಂಡಿರುವ ಘಟನೆ ಗಡಿ ಜಿಲ್ಲೆ ಬೆಳಗಾವಿಯಲ್ಲಿ ನಡೆದಿದೆ.

68ನೇ ಕನ್ನಡ ರಾಜ್ಯೋತ್ಸವ ಹಿನ್ನೆಲೆಯಲ್ಲಿ ಬೆಳಗಾವಿಯ ಚನ್ನಮ್ಮ ವೃತ್ತದಲ್ಲಿ ಮೆರವಣಿಗೆ ಸಾಗುತ್ತಿತ್ತು. ಈ ವೇಳೆ ಯುವಕರ ಎರಡು ಗುಂಪುಗಳ ನಡುವೆ ಗಲಾಟೆ ಆರಂಭವಾಗಿದ್ದು, ಹೊಡೆದಾಡಿಕೊಂಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮೆರವಣಿಗೆಯಲ್ಲಿ ನೃತ್ಯ ಮಾಡುವ ವಿಚಾರವಾಗಿ ಯುವಕರ ನಡುವೆ ಜಗಳ ಶುರುವಾಗಿದೆ. ವಾಗ್ವಾದ ವಿಕೋಪಕ್ಕೆ ತಿರುಗಿದ್ದು ಯುವಕರು ಕೈಕೈ ಮಿಲಾಸಿಕೊಂಡಿದ್ದಾರೆ. ಯುವಕರ ನಡುವೆ ಗಲಾಟೆ ನಡೆಯುತ್ತಿದರು ಪೊಲೀಸರು ಮೌನವಾಗಿದ್ದರು ಎಂಬ ಆರೋಪ ಕೇಳಿಬಂದಿದೆ. ಗಲಾಟೆ ವೇಳೆ ಮೆರವಣಿಗೆಯಲ್ಲಿದ್ದ ಇತರರ ಮೇಲೂ ಹಲ್ಲೆ ನಡೆಸಲಾಗಿದೆ ಎಂಬ ದೂರು ಕೇಳಿಬಂದಿದೆ.

For Latest News Updates, Join Our Whatsapp Community🚩
RELATED ARTICLES

Most Popular