ರಾಖಿ ಸಾವಂತ್ ವಿರುದ್ಧ ನಟಿ ಶೆರ್ಲಿನ್ ಚೋಪ್ರಾ ಅವರು ದಾಖಲಿಸಿರುವ ಎಫ್‌ಐಆರ್‌ಗೆ ಸಂಬಂಧಿಸಿದಂತೆ ಅವರನ್ನು ವಶಕ್ಕೆ ಪಡೆದು ಮುಂಬೈ ಪೊಲೀಸರು ವಿಚಾರಣೆ ನಡೆಸ್ತಿದ್ದಾರೆ.
ಕಳೆದ ವರ್ಷದ ಪ್ರಕರಣದಲ್ಲಿ ಅಂಬೋಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ರಾಖಿ ಸಾವಂತ್ ಬಂಧನದ ಬಗ್ಗೆ ಎಲ್ಲರಿಗೂ ತಿಳಿಸಲು ಶೆರ್ಲಿನ್ ಚೋಪ್ರಾ ಟ್ವೀಟ್ ಮಾಡಿದ್ದಾರೆ. . “ಅಂಬೋಲಿ ಪೊಲೀಸರು ಎಫ್‌ಐಆರ್ 883/2022 ಗೆ ಸಂಬಂಧಿಸಿದಂತೆ ರಾಖಿ ಸಾವಂತ್ ಅವರನ್ನು ಬಂಧಿಸಿದ್ದಾರೆ. ನಿನ್ನೆ ರಾಖಿ ಸಾವಂತ್ ಅವರ ಎಬಿಎ 1870/2022 ಅನ್ನು ಮುಂಬೈ ಸೆಷನ್ ಕೋರ್ಟ್ ತಿರಸ್ಕರಿಸಿದೆ” ಎಂದು ಅವರು ಟ್ವೀಟ್ ಮಾಡಿದ್ದಾರೆ.
ಕಳೆದ ವರ್ಷ, #MeToo ಆರೋಪಿ ಸಾಜಿದ್ ಖಾನ್ ವಿರುದ್ಧ ನೀಡಿದ ಹೇಳಿಕೆಗಾಗಿ ರಾಖಿ ಸಾವಂತ್ ಶೆರ್ಲಿನ್ ಚೋಪ್ರಾ ಅವರನ್ನು ತರಾಟೆಗೆ ತೆಗೆದುಕೊಂಡಿದ್ದರು. ಅಕ್ಟೋಬರ್ 29 ರಂದು ಸಾಜಿದ್ ಖಾನ್ ವಿರುದ್ಧ ಹೇಳಿಕೆಯನ್ನು ದಾಖಲಿಸಿದ ನಂತರ ಶೆರ್ಲಿನ್ ಮಾಧ್ಯಮಗಳೊಂದಿಗೆ ಮಾತನಾಡುತ್ತಾ, ಸಲ್ಮಾನ್ ಖಾನ್, ಸಾಜಿದ್ ಖಾನ್ ಅವರನ್ನು ರಕ್ಷಿಸುತ್ತಿದ್ದಾರೆ ಎಂದು ಆರೋಪಿಸಿದರು. ಆದರೆ ರಾಖಿ, ಸಾಜಿದ್ ಅವರನ್ನು ಸಮರ್ಥಿಸಿಕೊಂಡು ಶೆರ್ಲಿನ್ ಹೇಳಿಕೆಯನ್ನು ಖಂಡಿಸಿದ್ದರು.
ಸದ್ಯ ರಾಖಿ ಸಾವಂತ್ ಇಂದು ಸಂಜೆ ತನ್ನ ಪತಿ ಆದಿಲ್ ದುರಾನಿಯೊಂದಿಗೆ ಪಾಲುದಾರರಾಗಿರುವ ತನ್ನ ನೃತ್ಯ ಅಕಾಡೆಮಿಯನ್ನು ಪ್ರಾರಂಭಿಸಬೇಕಿತ್ತು. ಆದರೆ ಇಂದೇ ಆಕೆಯನ್ನು ಅಂಬೋಲಿ ಪೊಲೀಸರು ಬಂಧಿಸಿದ್ದಾರೆ.
https://twitter.com/SherlynChopra/status/1615967658993938433?ref_src=twsrc%5Etfw%7Ctwcamp%5Etweetembed%7Ctwterm%5E1615967658993938433%7Ctwgr%5E7b7106b982926417550e4b414b8a50df5f0900a8%7Ctwcon%5Es1_&ref_url=https%3A%2F%2Fwww.indiatoday.in%2Ftelevision%2Fcelebrity%2Fstory%2Frakhi-sawant-arrested-amboli-police-sherlyn-chopra-complaint-2323587-2023-01-19