ರಾಖಿ ಸಾವಂತ್ ಆನ್‌ಲೈನ್‌ನಲ್ಲಿ ಹರಿದಾಡುತ್ತಿರುವ ಒಂದು ವೀಡಿಯೊದಲ್ಲಿ ಪಾಕಿಸ್ತಾನಕ್ಕೆ ಭೇಟಿ ನೀಡುತ್ತಿರುವುದು ಕಂಡುಬಂದಿದೆ. ನಟಿ ಹನಿಯಾ ಅಮೀರ್ ಅವರನ್ನು ಭೇಟಿ ಮಾಡಲು ಪಾಕಿಸ್ತಾನಕ್ಕೆ ಭೇಟಿ ನೀಡಿದ್ದಾರೆ ಎಂದು ಹೇಳಲಾಗುತ್ತಿದೆ. ಲಾಹೋರ್ ವಿಮಾನ ನಿಲ್ದಾಣದಲ್ಲಿರುವ ಅವರ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದೆ.
ಪಾಕಿಸ್ತಾನಿ ನಟಿ ಹನಿಯಾ ಅಮೀರ್ ಅವರ ಬಗ್ಗೆ ತಮ್ಮ ಮೆಚ್ಚುಗೆಯನ್ನು ವ್ಯಕ್ತಪಡಿಸಿದ ಮತ್ತು ಪಾಕಿಸ್ತಾನಕ್ಕೆ ಭೇಟಿ ನೀಡುವ ಯೋಜನೆಯನ್ನು ಬಹಿರಂಗಪಡಿಸಿದ ವೀಡಿಯೊವನ್ನು ಹಂಚಿಕೊಂಡ ನಂತರ ರಾಖಿ ಸಾವಂತ್ ಅಂತಿಮವಾಗಿ ಪಾಕಿಸ್ತಾನಕ್ಕೆ ಭೇಟಿ ನೀಡಿದ್ದಾರೆ.
ರಾಖಿಯ ಅಧಿಕೃತ ಇನ್‌ಸ್ಟಾಗ್ರಾಮ್ ಹ್ಯಾಂಡಲ್‌ನಲ್ಲಿ ಪೋಸ್ಟ್ ಮಾಡಲಾದ ವೀಡಿಯೊದಲ್ಲಿ, ಲಾಹೋರ್ ವಿಮಾನ ನಿಲ್ದಾಣದಲ್ಲಿ ಪೋಸ್ ನೀಡುತ್ತಿರುವುದು ಕಂಡುಬರುತ್ತದೆ. ಬಿಳಿ ಪೋಲ್ಕಾ ಡಾಟ್ ಜಂಪ್‌ಸೂಟ್ ಧರಿಸಿ, ರಾಖಿ ಸೂಟ್‌ಕೇಸ್ ನೊಂದಿಗೆ ನಿಂತಿದ್ದಾರೆ. ಅಲ್ಲದೇ, “ನೋಡಿ, ನಾನು ಪಾಕಿಸ್ತಾನದಲ್ಲಿ ವಾಸಿಸಲು ಭಾರತದಿಂದ ಅನೇಕ ಸೂಟ್‌ಕೇಸ್‌ಗಳನ್ನು ತಂದಿದ್ದೇನೆ. ನಾನು ಲಾಹೋರ್ ವಿಮಾನ ನಿಲ್ದಾಣದಲ್ಲಿ ನಿಂತಿದ್ದೇನೆ” ಎಂದಿದ್ದಾರೆ.
ಇದಕ್ಕೂ ಮೊದಲು ರಾಖಿ ಸಾವಂತ್ ಇನ್‌ಸ್ಟಾಗ್ರಾಮ್‌ನಲ್ಲಿ ಒಂದು ವೀಡಿಯೊವನ್ನು ಹಂಚಿಕೊಂಡಿದ್ದು”ನಾನು ಪಾಕಿಸ್ತಾನದ ಸ್ಟಾರ್ ಗಳಾದ ಹನಿಯಾ, ನರ್ಗಿಸ್ ಮತ್ತು ಇತರರನ್ನು ಭೇಟಿ ಮಾಡಲು ಬಯಸುತ್ತೇನೆ. ಆದ್ದರಿಂದ, ನಾನು ಪಾಕಿಸ್ತಾನಕ್ಕೆ ಬರುತ್ತಿದ್ದೇನೆ. ಹನಿಯಾ, ದಯವಿಟ್ಟು ವಿಮಾನ ನಿಲ್ದಾಣಕ್ಕೆ ಬಂದು ನನ್ನನ್ನು ಕರೆದುಕೊಂಡು ಹೋಗಿ” ಎಂದು ಹೇಳಿದ್ದರು.