ಬೆಂಗಳೂರು: ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದಿ.ಬುಲೆಟ್ ಪ್ರಕಾಶ್ ಪುತ್ರ ರಕ್ಷಕ್ ಬುಲೆಟ್ ವಿರುದ್ಧ ಎಫ್ಐಆರ್ ದಾಖಲಾಗಿದೆ.
ರಕ್ಷಕ್ ಬುಲೆಟ್ ಚಲಾಯಿಸುತ್ತಿದ್ದ ಕಾರು ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರನ ಕಾಲು ಮುರಿತ ಪ್ರಕರಣಕ್ಕೆ ಸಬಂಧಿಸಿದಂತೆ ರಕ್ಷಕ್ ಬುಲೆಟ್ ವಿರುದ್ಧ ಹೆಣ್ನುರು ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ವೇಣುಗೋಪಾಲ್ ಗಂಭೀರವಾಗಿ ಗಾಯಗೊಂಡಿರುವ ಬೈಕ್ ಸವಾರ. ಗಾಯಾಳು ಸ್ನೇಹಿತೆ ಆಯೇಷಾ ನೀಡಿರುವ ದೂರಿನ ಹಿನ್ನೆಲೆಯಲ್ಲಿ ರಕ್ಷಕ್ ಬುಲೆಟ್ ವಿರುದ್ಧ ಹೆಣ್ಣೂರು ಸಂಚಾರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಬೈಕ್ ಸವಾರ ಶಿಡ್ಲಘಟ್ಟ ಮೂಲದ ವೇಣುಗೋಪಾಲ್ ಅವರ ಎಡಗಾಲಿನ ಮೂಳೆ ಮುರಿದ್ದು, ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.