ಹತ್ತಿರವಾದವರು ಕಷ್ಟ ಅನುಭವಿಸುತ್ತಿರುವಾಗ ನಾವು ಸಂಭ್ರಮಾಚರಣೆ ಮಾಡುವುದು ಸರಿಯಲ್ಲ; ರಕ್ಷಕ್ ಬುಲೆಟ್ ಹೇಳಿಕೆ

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್ ಸೇರಿದಂತೆ 19 ಆರೋಪಿಗಳನ್ನು ಬಂಧಿಸಲಾಗಿದೆ. ನಟ ದರ್ಶನ್ ಹಾಗೂ ಗ್ಯಾಂಗ್ ನಿಂದ ಕೊಲೆ ಕೇಸ್ ಗೆ ಸಂಬಂಧಿಸಿದಂತೆ ಸ್ಯಾಂಡಲ್ ವುಡ್ ನ ಹಲವು ನಟ-ನಟಿಯರು ತಮ್ಮದೇ ರೀತಿಯಲ್ಲಿ ಪ್ರತಿಕ್ರಿಯೆಗಳನ್ನು ನೀಡುತ್ತಿದ್ದಾರೆ.

ಉದಯೋನ್ಮುಖ ನಟ ರಕ್ಷಕ್ ಬುಲೆಟ್ ಕೂಡ ಈ ನಿಟ್ಟಿನಲ್ಲಿ ಪರೋಕ್ಷ ಹೇಳಿಕೆ ನೀಡಿದ್ದಾರೆ. ಜೂನ್ 21ರಂದು ಬುಲೆಟ್ ಪ್ರಕಾಶ್ ಮಗ, ರಕ್ಷಕ್ ಬುಲೆಟ್ ಹುಟ್ಟುಹಬ್ಬ. ಅಂದು ಅವರ ಸಿನಿಮಾ ಕೂಡ ಘೋಷಣೆಯಾಗುವ ಸಾಧ್ಯತೆ ಇದೆ. ಈ ಸಂದರ್ಭದಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿರುವ ರಕ್ಷಕ್ ಬುಲೆಟ್, ಹತ್ತಿರವಾದವರು ಕಷ್ಟ ಅನುಭವಿಸುತ್ತಿದ್ದಾಗ ನಾವು ಸಂಭ್ರಮಾಚರಣೆ ಮಾಡುವುದು ಸರಿಯಲ್ಲ ಎಂದು ಹೇಳುವ ಮೂಲಕ ಹುಟ್ಟುಹಬ್ಬದ ಸಂಭ್ರಮಾಚರಣೆಗೆ ಬ್ರೇಕ್ ಹಾಕಿದ್ದಾರೆ.

ಎಲ್ಲರಂತೆ ನನಗೂ ಕೂಡ ನನ್ನ ತಂದೆಯೇ ಮೊದಲ ಹಿರೋ. ಹೀರೋ ಮಾತ್ರವಲ್ಲ ಒಳ್ಳೆಯ ಮಾರ್ಗದರ್ಶಕ ಕೂಡ. ಇಂದು ಬೆಳಿಗ್ಗೆಯಿಂದ ನನ್ನ ತಂದೆಯ ನೆನಪು ತುಂಬಾ ಕಾಡುತ್ತಿದೆ. ಫಾದರ್ಸ್ ಡೇ ಶುಭಾಷಯಗಳು.

ಇತ್ತೀಚಿನ ದಿನಗಳಲ್ಲಿ ನಡೆದ ಕೆಲವೊಂದು ಘಟನೆಗಳು ಮನಸ್ಸಿಗೆ ನೋವು ತಂದಿದೆ. ನಮ್ಮ ಮನಸ್ಸಿಗೆ ಹತ್ತಿರವಾದವರು ಕಷ್ಟ ಅನುಭವಿಸುತ್ತಿದ್ದಾಗ ನಾವು ಸಂಭ್ರಮಾಚರಣೆ ಮಾಡುವುದು ಸರಿಯಲ್ಲ ಎನ್ನುವ ಭಾವನೆ ನನ್ನದು.

ನಾನು ಈ ವರ್ಷ ಹುಟ್ಟುಹಬ್ಬ ಆಚರಣೆ ಮಾಡುವುದು ಬೇಡ ಎಂಬ ತೀರ್ಮಾನಕ್ಕೆ ಬಂದಿದ್ದೇನೆ. ಮುಂದಿನ ವರ್ಷದ ಹುಟ್ಟುಹಬ್ಬ ಅಷ್ಟರಲ್ಲಿ ಏನಾದರೂ ಒಂದು ಸಾಧನೆ ಮಾಡುತ್ತೇನೆ. ಆಗ ನನ್ನ ಎಲ್ಲಾ ಸ್ನೇಹಿತರು, ಹಿತೈಷಿಗಳು, ಗುರು-ಹಿರಿಯರು, ಪ್ರೀತಿಪಾತ್ರರೊಂದಿಗೆ ಆಚರಣೆ ಮಾಡುತ್ತೇನೆ ಎಂದು ತಿಳಿಸಿದ್ದಾರೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read