HomeEntertainmentBIG NEWS: ನಿರೀಕ್ಷಣಾ ಜಮೀನು ಕೋರಿ ಕೋರ್ಟ್ ಮೊರೆಹೋದ ನಟ ರಕ್ಷಿತ್ ಶೆಟ್ಟಿ

BIG NEWS: ನಿರೀಕ್ಷಣಾ ಜಮೀನು ಕೋರಿ ಕೋರ್ಟ್ ಮೊರೆಹೋದ ನಟ ರಕ್ಷಿತ್ ಶೆಟ್ಟಿ

ಬೆಂಗಳೂರು: ಕಾಪಿ ರೈಟ್ ಉಲ್ಲಂಘನೆ ಆರೋಪದಲ್ಲಿ ತನ್ನ ವಿರುದ್ಧ ದಾಖಲಾಗಿರುವ ಎಫ್ ಐಆರ್ ಹಿನ್ನೆಲೆಯಲ್ಲಿ ನಟ ರಕ್ಷಿತ್ ಶೆಟ್ಟಿ ಕೋರ್ಟ್ ಮೊರೆಹೋಗಿದ್ದಾರೆ.

ನಿರೀಕ್ಷಣಾ ಜಾಮೀನು ಕೋರಿ ಬೆಂಗಳೂರಿನ ಸೆಷನ್ಸ್ ಕೋರ್ಟ್ ಗೆ ನಟ ರಕ್ಷಿತ್ ಶೆಟ್ಟಿ ಅರ್ಜಿ ಸಲ್ಲಿಸಿದ್ದಾರೆ. ಅರ್ಜಿ ವಿಚಾರಣೆ ಕೈಗೆತ್ತಿಕೊಂಡ ನ್ಯಾಯಾಲಯ ಜುಲೈ 24ಕ್ಕೆ ವಿಚಾರಣೆ ಮುಂದೂಡಿದೆ.

‘ಬ್ಯಾಚಲರ್ಸ್ ಪಾರ್ಟಿ’ ಚಿತ್ರಕ್ಕಾಗಿ ನ್ಯಾಯ ಎಲ್ಲಿದೆ ಸಾಂಗ್ ನ್ನು ಅನುಮತಿ ಇಲ್ಲದೇ ಬಳಸಿದ ಕಾರಣಕ್ಕೆ ಕಾಪಿ ರೈಟ್ಸ್ ಉಲ್ಲಂಘನೆ ಮಾಡಿದ ಆರೋಪದಲ್ಲಿ ಎಂಆರ್ ಟಿ ಮ್ಯೂಸಿಕ್ ಸಂಸ್ಥೆಯ ನವೀನ್ ಕುಮಾರ್ ಎಂಬುವವರು ಯಶವಂತಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಈ ಹಿನ್ನೆಲೆಯಲ್ಲಿ ನಟ ರಕ್ಷಿತ್ ಶೆಟ್ಟಿ ವಿರುದ್ಧ ಎಫ್ಐಆರ್ ದಾಖಲಾಗಿತ್ತು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇದೀಗ ರಕ್ಷಿತ್ ಶೆಟ್ಟಿ ನಿರೀಕ್ಷಣಾ ಜಾಮೀನಿಗಾಗಿ ಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದು, ರಕ್ಷಿತ್ ಶೆಟ್ಟಿ ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ಪಿಪಿ ಕಾಲಾವಕಾಶ ಕೋರಿದ್ದಾರೆ. ಈ ಹಿನ್ನೆಲೆಯಲ್ಲಿ ಅರ್ಜಿ ವಿಚಾರಣೆ ಮುಂದೂಡಲಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular