HomeEntertainmentರಾಮ್ ಚರಣ್ ನಟನೆಯ 'ಗೇಮ್ ಚೇಂಜರ್' ಟೀಸರ್ ರಿಲೀಸ್

ರಾಮ್ ಚರಣ್ ನಟನೆಯ ‘ಗೇಮ್ ಚೇಂಜರ್’ ಟೀಸರ್ ರಿಲೀಸ್

ಮೆಗಾ ಪವರ್ ಸ್ಟಾರ್ ರಾಮ್ ಚರಣ್ ಅಭಿನಯದ ಶಂಕರ್ ನಿರ್ದೇಶನದ ‘ಗೇಮ್ ಚೇಂಜರ್’ ಚಿತ್ರದ ಟೀಸರ್ ನಿನ್ನೆಯಷ್ಟೇ ಯೂಟ್ಯೂಬ್ ನಲ್ಲಿ  ಬಿಡುಗಡೆಯಾಗಿದ್ದು, ನೋಡುಗರ ಗಮನ ಸೆಳೆದಿದೆ. ಈ ಟೀಸರ್ ರಿಲೀಸ್ ಆದ 15 ಗಂಟೆಗಳಲ್ಲಿ ಸುಮಾರು 25 ಮಿಲಿಯನ್ ವೀಕ್ಷಣೆ ಪಡೆದುಕೊಳ್ಳುವ ಮೂಲಕ ಯೂಟ್ಯೂಬ್ ನಲ್ಲಿ ಧೂಳೆಬ್ಬಿಸಿದೆ.

ಆಕ್ಷನ್ ಡ್ರಾಮಾ ಕಥಾದಾರಿತ ಈ ಚಿತ್ರವನ್ನು ಶ್ರೀ ವೆಂಕಟೇಶ್ವರ ಕ್ರಿಯೇಷನ್ಸ್ ಹಾಗೂ ಹಾಗೂ ಜಿ ಸ್ಟುಡಿಯೋಸ್ ಬ್ಯಾನರ್ ನಲ್ಲಿ ದಿಲ್ ರಾಜು ಹಾಗೂ ಶಿರೀಶ್ ನಿರ್ಮಾಣ ಮಾಡಿದ್ದು,  ರಾಮ್ ಚರಣ್ ಸೇರಿದಂತೆ ಕಿಯಾರಾ ಅಡ್ವಾಣಿ, ಅಂಜಲಿ, ಸಮುದ್ರಕನಿ, ಎಸ್ ಜೆ ಸೂರ್ಯ ಪ್ರಮುಖ ಪಾತ್ರದಲ್ಲಿದ್ದಾರೆ. ಶಮೀರ್ ಮೊಹಮ್ಮದ್ ಹಾಗೂ ಆಂಟೋನಿ ರೂಬೆನ್ ಅವರ ಸಂಕಲನ ಎಸ್ ತಿರುನಾವುಕ್ಕರಸು ಛಾಯಾಗ್ರಹಣವಿದೆ. ಇನ್ನುಳಿದಂತೆ ಖ್ಯಾತ ಸಂಗೀತ ನಿರ್ದೇಶಕ ತಮ್ಮನ್ ಎಸ್ ಮ್ಯೂಸಿಕ್ ಕಂಪೋಸ್ ಮಾಡಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular