HomeKarnatakaBIG NEWS: ಜ. 22 ಅಯೋಧ್ಯೆ ಭವ್ಯ ಶ್ರೀರಾಮ ಮಂದಿರ ಉದ್ಘಾಟನೆ

BIG NEWS: ಜ. 22 ಅಯೋಧ್ಯೆ ಭವ್ಯ ಶ್ರೀರಾಮ ಮಂದಿರ ಉದ್ಘಾಟನೆ

ನವದೆಹಲಿ: ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ಭವ್ಯ ಶ್ರೀ ರಾಮ ಮಂದಿರವನ್ನು ಮುಂದಿನ ವರ್ಷ ಜನವರಿ 22ರಂದು ಉದ್ಘಾಟಿಸಲಾಗುವುದು.

ಪ್ರಧಾನಿ ನರೇಂದ್ರ ಮೋದಿ ಅವರು ಶ್ರೀರಾಮ ಮಂದಿರ ಉದ್ಘಾಟಿಸಲಿದ್ದಾರೆ. ಅದೇ ದಿನ ಗರ್ಭಗುಡಿಯಲ್ಲಿ ಶ್ರೀರಾಮನ ವಿಗ್ರಹ ಪ್ರತಿಷ್ಠಾಪನೆ ಮಾಡುವ ಸಾಧ್ಯತೆ ಇದೆ. ಮೈಸೂರಿನ ಶಿಲ್ಪಿ ಅರುಣ್ ಯೋಗಿರಾಜ್ ಅವರು ಶ್ರೀ ರಾಮನ ಸುಂದರ ಮೂರ್ತಿಯನ್ನು ಕೆತ್ತಿದ್ದಾರೆ. ಅದನ್ನು ದೇವಾಲಯ ಉದ್ಘಾಟನೆಯ ದಿನ ಗರ್ಭಗುಡಿಯಲ್ಲಿ ಪ್ರತಿಷ್ಠಾಪನೆ ಮಾಡಲಾಗುವುದು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈ ಮೊದಲು ಡಿಸೆಂಬರ್ ಅಂತ್ಯದ ವೇಳೆಗೆ ಶ್ರೀರಾಮ ಮಂದಿರ ಕಾಮಗಾರಿ ಪೂರ್ಣಗೊಳಿಸಿ ಉದ್ಘಾಟಿಸಲಾಗುತ್ತದೆ ಎನ್ನಲಾಗಿತ್ತು. ಆದರೆ, ಮುಂದಿನ ವರ್ಷ ಜನವರಿ 22ರಂದು ಪ್ರಧಾನಿ ಮೋದಿ ಅವರಿಂದ ಭವ್ಯ ಶ್ರೀ ರಾಮ ಮಂದಿರ ಉದ್ಘಾಟನೆಯಾಗಲಿದೆ ಎಂದು ಹೇಳಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular