ರಾಮಮಂದಿರ ಪ್ರಾಣ ಪ್ರತಿಷ್ಠೆ ಹಿನ್ನಲೆ ನಾಳೆ ಸಾರ್ವಜನಿಕ ರಜೆ ಘೋಷಿಸಿದ ಕಾಂಗ್ರೆಸ್ ಆಡಳಿತದ ಮೊದಲ ರಾಜ್ಯ ಹಿಮಾಚಲ ಪ್ರದೇಶ: ಕರ್ನಾಟಕ, ತೆಲಂಗಾಣದಲ್ಲಿ ರಜೆ ಇಲ್ಲ

ನವದೆಹಲಿ: ಮುಖ್ಯಮಂತ್ರಿ ಸುಖವಿಂದರ್ ಸಿಂಗ್ ಸುಖು ನೇತೃತ್ವದ ಕಾಂಗ್ರೆಸ್ ಸರ್ಕಾರವು ಪ್ರಾಣ ಪ್ರತಿಷ್ಠಾ ಸಮಾರಂಭದ ದೃಷ್ಟಿಯಿಂದ ಹಿಮಾಚಲ ಪ್ರದೇಶದಲ್ಲಿ ಸೋಮವಾರ (ಜನವರಿ 22) ಸಾರ್ವಜನಿಕ ರಜೆ ಘೋಷಿಸಿದೆ.

ಐತಿಹಾಸಿಕ ಸಂದರ್ಭದಲ್ಲಿ ರಜೆಯನ್ನು ಘೋಷಿಸಿದ ಮೂರರಲ್ಲಿ ಹಿಮಾಚಲ ಪ್ರದೇಶವು ಮೊದಲ ಕಾಂಗ್ರೆಸ್ ಆಡಳಿತದ ರಾಜ್ಯವಾಗಿದೆ ಎಂಬುದು ಇಲ್ಲಿ ಉಲ್ಲೇಖಾರ್ಹ. ಕರ್ನಾಟಕ ಮತ್ತು ತೆಲಂಗಾಣದಲ್ಲಿ ಆಡಳಿತಾರೂಢ ಕಾಂಗ್ರೆಸ್ ಇನ್ನೂ ರಜೆ ಘೋಷಿಸಿಲ್ಲ.

ಅಯೋಧ್ಯೆಯಲ್ಲಿ ರಾಮ್ ಲಲ್ಲಾ ಪ್ರಾಣ್ ಪ್ರತಿಷ್ಠೆಯ ಸಂದರ್ಭದಲ್ಲಿ ಹಿಮಾಚಲ ಪ್ರದೇಶದಲ್ಲಿ ಎಲ್ಲಾ ಶಿಕ್ಷಣ ಸಂಸ್ಥೆಗಳು(ಶಾಲೆಗಳು, ಕಾಲೇಜುಗಳು ಮತ್ತು ವಿಶ್ವವಿದ್ಯಾಲಯಗಳು) ಮತ್ತು ರಾಜ್ಯ ಸರ್ಕಾರಿ ಕಚೇರಿಗಳು ಮುಚ್ಚಲ್ಪಡುತ್ತವೆ. 22ನೇ ಜನವರಿ 2024 ರ ಪೂರ್ಣ ದಿನವನ್ನು(ಸೋಮವಾರ) ಎಲ್ಲಾ ವಿಭಾಗಗಳು/ಬೋರ್ಡ್‌ಗಳು/ಕಾರ್ಪೊರೇಷನ್‌ಗಳು/ಶಾಲೆಗಳು/ಕಾಲೇಜುಗಳು/ವಿಶ್ವವಿದ್ಯಾಲಯಗಳು/ಇತ್ಯಾದಿಗಳಲ್ಲಿ ಸಾರ್ವಜನಿಕ ರಜಾದಿನವಾಗಿ ಆಚರಿಸಲಾಗುತ್ತದೆ ಎಂದು ಹಿಮಾಚಲ ಪ್ರದೇಶ ಸರ್ಕಾರ ಹೊರಡಿಸಿದ ಅಧಿಸೂಚನೆಯಲ್ಲಿ ತಿಳಿಸಿದೆ.

ಪ್ರಾಣ ಪ್ರತಿಷ್ಠಾ ಸಮಾರಂಭದ ಆಹ್ವಾನ ತಿರಸ್ಕರಿಸಿದ ಕಾಂಗ್ರೆಸ್ ನಾಯಕತ್ವ

ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಮತ್ತು ಹಿರಿಯ ನಾಯಕರಾದ ಸೋನಿಯಾ ಗಾಂಧಿ ಮತ್ತು ಅಧೀರ್ ರಂಜನ್ ಚೌಧರಿ ಅವರು ಪ್ರಾಣ ಪ್ರತಿಷ್ಠಾ ಸಮಾರಂಭದ ಆಹ್ವಾನವನ್ನು ಸ್ವೀಕರಿಸಲು ನಿರಾಕರಿಸಿದ ಕೆಲವೇ ದಿನಗಳಲ್ಲಿ ಸುಖವಿಂದರ್ ಸಿಂಗ್ ಸುಖು ನೇತೃತ್ವದ ಸರ್ಕಾರವು ರಜೆ ಘೋಷಿಸಲು ನಿರ್ಧರಿಸಿದೆ.

ಉತ್ತರ ಪ್ರದೇಶ, ಮಹಾರಾಷ್ಟ್ರ, ಗೋವಾ, ಹರಿಯಾಣ, ಒಡಿಶಾ, ರಾಜಸ್ಥಾನ, ಅಸ್ಸಾಂ ಮತ್ತು ಮಧ್ಯಪ್ರದೇಶ ಸೇರಿದಂತೆ ಹಲವು ರಾಜ್ಯಗಳ ಸರ್ಕಾರವು ಸಮಾರಂಭದ ಸಂದರ್ಭದಲ್ಲಿ ಅರ್ಧ ದಿನದ ರಜೆಯನ್ನು ಘೋಷಿಸಿದೆ. ಆಯಾ ರಾಜ್ಯಗಳಲ್ಲಿನ ಎಲ್ಲಾ ಸರ್ಕಾರಿ ಕಚೇರಿಗಳು ಮಧ್ಯಾಹ್ನ 2.30 ರವರೆಗೆ ಮುಚ್ಚಲ್ಪಡುತ್ತವೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read