ರಾಮ ಮಂದಿರ ಯಾವ ಪಕ್ಷಕ್ಕೂ ಸೇರಿದ್ದಲ್ಲ; ಮಂದಿರ ನಿರ್ಮಾಣಕ್ಕಾಗಿ 500 ವರ್ಷಗಳ ಹೋರಾಟ; ಅಂದು ಬಿಜೆಪಿ ಕೂಡ ಇರಲಿಲ್ಲ; ಆರ್.ಅಶೋಕ್

ಬೆಂಗಳೂರು: ಅಯೋಧ್ಯೆ ಶ್ರೀರಾಮ ಮಂದಿರ ಯಾವ ಪಕ್ಷಕ್ಕೂ ಸೇರಿಲ್ಲ. ಎಲ್ಲಾ ರಾಮ ಭಕ್ತರಿಗೆ ಸೇರಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಆರ್.ಅಶೋಕ್, ಮಂದಿರ ಉದ್ಘಾಟನೆಗೆ ಎಲ್ಲರಿಗೂ ಆಹ್ವಾನ ಕೊಡಬೇಕು ಎಂದು ನಿರೀಕ್ಷೆ ಮಾಡಬೇಕಿಲ್ಲ. ಆಹ್ವಾನವಿಲ್ಲ ಎಂದು ಹೇಳುವ ಕಾಂಗ್ರೆಸ್‌ ನಾಯಕರು ಒಂದು ಕಾಲದಲ್ಲಿ ಶ್ರೀರಾಮ ಕಾಲ್ಪನಿಕ ವ್ಯಕ್ತಿ ಎಂದಿದ್ದರು ಎಂದು ಕಿಡಿಕಾರಿದ್ದಾರೆ.

ಅಯೋಧ್ಯೆಯ ಶ್ರೀರಾಮ ಮಂದಿರ ನಿರ್ಮಾಣಕ್ಕಾಗಿ ಐನೂರು ವರ್ಷಗಳಿಂದ ಹೋರಾಟ ನಡೆಯುತ್ತಿತ್ತು. ಆಗ ಬಿಜೆಪಿ ಕೂಡ ಇರಲಿಲ್ಲ. ಇದು ಯಾವುದೇ ಪಕ್ಷಕ್ಕೆ ಸೇರಿದ ಮಂದಿರವಲ್ಲ. ಎಲ್ಲ ರಾಮಭಕ್ತರಿಗೆ ಸೇರಿದೆ ಎಂದರು.

ಸಿಎಂ ಸಿದ್ದರಾಮಯ್ಯ ಇತ್ತೀಚೆಗೆ ದೇವಸ್ಥಾನದ ಉದ್ಘಾಟನೆಗೆ ಹೋಗಿದ್ದರು. ಪೂಜೆ ಮಾಡಲು ಒಳಗೆ ಹೋಗಿಲ್ಲ. ಆದರೆ ಮಸೀದಿಗೆ ಕರೆದರೆ ಟೋಪಿ ಹಾಕಿಕೊಂಡು ಓಡುತ್ತಾರೆ. ಕೇಸರಿ ಪೇಟವನ್ನು ಮಾತ್ರ ಹಾಕಿಕೊಳ್ಳುವುದಿಲ್ಲ. ಕಾಂಗ್ರೆಸ್‌ ನಾಯಕರು ಒಂದು ಕಾಲದಲ್ಲಿ ರಾಮನ ಜನ್ಮ ಪ್ರಮಾಣಪತ್ರ ಕೇಳಿದ್ದರು, ರಾಮ ಕಾಲ್ಪನಿಕ ವ್ಯಕ್ತಿ ಎಂದು ಕೋರ್ಟ್‌ಗೆ ಅಫಿಡವಿಟ್‌ ಸಲ್ಲಿಸಿದ್ದರು ಎಂದು ಕಿಡಿಕಾರಿದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read