HomeKarnatakaBREAKING: ನಾಳೆಯಿಂದ ರಂಜಾನ್ ಉಪವಾಸ ಆರಂಭ: ಖಾಝಿ ಘೋಷಣೆ

BREAKING: ನಾಳೆಯಿಂದ ರಂಜಾನ್ ಉಪವಾಸ ಆರಂಭ: ಖಾಝಿ ಘೋಷಣೆ

ಮಂಗಳೂರು: ಕೇರಳದ ಪೊನ್ನಾನಿ, ಕಡಲುಂಡಿಯಲ್ಲಿ ಪವಿತ್ರ ರಂಜನ್ ಮಾಸದ ಚಂದ್ರ ದರ್ಶನವಾಗಿದೆ ಈ ಹಿನ್ನೆಲೆಯಲ್ಲಿ ಮಾರ್ಚ್ 2ರ ಭಾನುವಾರದಿಂದ ರಂಜಾನ್ ಉಪವಾಸ ಪ್ರಾರಂಭವಾಗಲಿದೆ.

ದಕ್ಷಿಣ ಕನ್ನಡ ಜಿಲ್ಲಾ ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ಮತ್ತು ಉಳ್ಳಾಲ ಖಾಝಿ ಎ.ಪಿ. ಅಬೂಬಕರ್‌ ಮುಸ್ಲಿಯಾರ್‌ ಅವರು ನಾಳೆಯಿಂದ ರಂಜಾನ್ ಉಪವಾಸ ಆರಂಭವಾಗಲಿದೆ ಎಂದು ಘೋಷಣೆ ಮಾಡಿದ್ದಾರೆ.

ಇಸ್ಲಾಮಿಕ್ ಸಂಪ್ರದಾಯದ ಪ್ರಕಾರ, ಅರ್ಧ ಚಂದ್ರನ ದರ್ಶನದೊಂದಿಗೆ ರಂಜಾನ್ ಅಧಿಕೃತವಾಗಿ ಪ್ರಾರಂಭವಾಗುತ್ತದೆ. ಶುಕ್ರವಾರ ಚಂದ್ರನು ಗೋಚರಿಸದ ಕಾರಣ, ಪವಿತ್ರ ತಿಂಗಳು ಶನಿವಾರ ಸಂಜೆ ಚಂದ್ರನ ದರ್ಶನದೊಂದಿಗೆ ಪ್ರಾರಂಭವಾಗಿದ್ದು, ಭಾನುವಾರದಿಂದ ಉಪವಾಸ ಆರಂಭವಾಗಲಿದೆ. ಮಾ. 31ರಂದು ರಂಜಾನ್ ಹಬ್ಬ ಆಚರಿಸಲಾಗುವುದು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular